ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮೇ 10 ರಂದು ಶನಿವಾರ ಮಧ್ಯಾಹ್ನ 12.05 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಕಚೇರಿ ಸಭಾಂಗಣದಲ್ಲಿ ಜರುಗುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5.45 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದ್‍ಗೆ ಪ್ರಯಾಣಿಸುವರು.
ಮೇ 12 ರಂದು ಸೋಮವಾರ ಮಧ್ಯಾಹ್ನ 12.05 ಗಂಟೆಗೆ ಬೆಂಗಳೂರಿನಿಂದ ಮರಳಿ ಕಲಬುರಗಿಗೆ ಆಗಮಿಸಿ, ಅಂದು ಮಧ್ಯಾಹ್ನ 12.45 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ವಲಯದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.