ಕಲಬುರಗಿ| ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ಬಾಂಬ್ ಬೆದರಿಕೆ; ಆರೋಪಿ ಬಂಧನ

Date:

Share post:

ಕಲಬುರಗಿ: ದೆಹಲಿ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಕರ್ನಾಟಕ ಎಕ್ಸ್ ಪ್ರೆಸ್(ಕೆಕೆ ಎಕ್ಸ್ ಪ್ರೆಸ್‌) ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಅದೇ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ರೈಲ್ವೆ ಕಂಟ್ರೋಲ್ ರೂಮ್ ಗೆ ಬೆದರಿಕೆ ಕರೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ವಾಡಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ (33) ಎಂಬಾತನ್ನೇ ಬಂಧಿಸಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಾಡಿ ರೈಲ್ವೆ ಪೊಲೀಸ್‌ ಠಾಣೆಯ ಪಿಎಸ್‌ಐ ವೀರಭದ್ರಪ್ಪ ಎಚ್‌.ಎಸ್ ಅವರು ತಿಳಿಸಿದ್ದಾರೆ.

4 ಗಂಟೆ ಕೆಕೆ ಎಕ್ಸ್ ಪ್ರೆಸ್ ರೈಲು ತಪಾಸಣೆ:

ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಅನುಮಾನವಿದೆ ಎಂದು ಪ್ರಯಾಣಿಕನೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದರಿಂದ ದೆಹಲಿ-ಬೆಂಗಳೂರು ಕರ್ನಾಟಕ ಎಕ್ಸ್ ಪ್ರೆಸ್ ರೈಲನ್ನು 4 ಗಂಟೆ ತಪಾಸಣೆಗೊಳಪಡಿಸಲಾದ ಘಟನೆ ರವಿವಾರ ಬೆಳಗಿನ ಜಾವ ವಾಡಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಬೆದರಿಕೆ ಕರೆಯಿಂದ ಎಚ್ಚೆತ್ತ ರೈಲ್ವೆ ಪೊಲೀಸರು, ಕೆಕೆ ಎಕ್ಸ್ ಪ್ರೆಸ್‌ ರೈಲನ್ನು ವಾಡಿ ನಿಲ್ದಾಣದಲ್ಲಿ ತಡೆದು ತಪಾಸಣೆ ಮಾಡಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಡಾಗ್ ಸಿಬ್ಬಂದಿಗಳು ಪ್ರಯಾಣಿಕರನ್ನು ಕೆಳಗಿಳಿಸಿ ರೈಲಿನ 22 ಬೋಗಿಗಳನ್ನು ತಪಾಸಣೆ ನಡೆಸಿದ್ದಾರೆ.

ಬಾಂಬ್ ಪತ್ತೆಯಾಗಿಲ್ಲ; ಸ್ಪಷ್ಟನೆ:

ಬಾಂಬ್ ಇಟ್ಟಿರುವ ಕುರಿತು ರೈಲ್ವೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿರುವ ವ್ಯಕ್ತಿಯನ್ನು ವಿಚಾರಿಸಿದಾಗ ಸುಳ್ಳು ಮಾಹಿತಿ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಬಾಂಬ್ ಬೆದರಿಕೆ ಇಟ್ಟಿದ್ದ ಪ್ರಯಾಣಿಕ ಗುಂತಕಲ್ ಕಡೆ ಪ್ರಯಾಣಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ವಾಡಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...