ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Date:

Share post:

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ(33) ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅವರು ರವಿವಾರ ಕಳೆದ ರಾತ್ರಿ ಉಡುಪಿಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಸಾಗಿಸಲಾಯಿತು ಆದರೆ ತಪಾಸಣೆ ನಡೆಸಿದ ವೈದ್ಯರು ರಾಕೇಶ್ ಪೂಜಾರಿ ಮೃಪಟ್ಟಿರುವುದಾಗಿ ತಿಳಿಸಿದ್ದಾರೆ.

2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆ ಆದರು ಮತ್ತು ರನ್ನರ್ ಅಪ್ ತಂಡದಲ್ಲಿ ಅವರು ಇದ್ದರು. ನಂತರದ ಸೀಸನ್ನಲ್ಲಿ ಅವರು ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...