ಬೆಂಗಳೂರು: ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಪ್ರಯಾಣವು ನನ್ನನ್ನು ಇಷ್ಟು ದೊಡ್ಡ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿತು, ನನ್ನನ್ನು ರೂಪಿಸಿತು ಮತ್ತು ನನಗೆ ಪಾಠಗಳನ್ನು ಕಲಿಸಿತು. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಸಂತೋಷದಿಂದ ನೋಡುತ್ತೇನೆ ಎಂದು ಬರೆದುಕೊಂಡಿದ್ದಾರೆ.