ಕಲಬುರಗಿ: ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಯಡ್ರಾಮಿ ತಾಲೂಕಿನ ಪಡದಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಪೂಜಾರಿ ( 31) ಸಿಡಿಲು ಬಡಿದು ಸಾವನ್ನಪ್ಪಿರೋ ರೈತ ಎಂದು ತಿಳಿದುಬಂದಿದೆ.
ಹೊಲದಲ್ಲಿ ಕೆಲಸ ಮಾಡುವ ವೇಳೆ ರೈತ ಸಿದ್ದಪ್ಪನಿಗೆ ಸಿಡಿಲು ಬಡಿದಿದೆ. ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿತ್ತು.