ಕಲಬುರಗಿ| ಆಳಂದ ತಾಲ್ಲೂಕಿನಲ್ಲಿ ಐದು ಹೊಸ ಪಿಯು ಕಾಲೇಜು ಆರಂಭ

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಐದು ಹೊಸ ಪಿಯು ಕಾಲೇಜುಗಳು ಮಂಜೂರಾಗಿವೆ. ಪ್ರಸಕ್ತ ವರ್ಷದಿಂದಲೇ ಅಗತ್ಯ ಸಿದ್ಧತೆಯೊಂದಿಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯು ಜೂನ್‌ನಲ್ಲಿ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ತಿಳಿಸಿದೆ.

ಆಳಂದ ಶಾಸಕ ಬಿ.ಆರ್. ಪಾಟೀಲ ಅವರ ಬೇಡಿಕೆಯ ಮೇರೆಗೆ ತಾಲ್ಲೂಕಿನ ಧುತ್ತರಗಾಂವ(kk0476), ನಿಂಬಾಳ(Kk0477), ಜಿಡಗಾ(kk0478), ತಡಕಲ(kk0479) ಹಾಗೂ ಮಾಡಿಯಾಳ(kk0480) ಗ್ರಾಮಗಳಲ್ಲಿ ಹೊಸದಾಗಿ ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಲಿವೆ. ಪ್ರಸಕ್ತ ವರ್ಷ ಕಲಾ ವಿಭಾಗದ ಪ್ರಥಮ ವರ್ಷದ ಪ್ರವೇಶಕ್ಕೆ ಅವಕಾಶ ಕೊಡಲಾಗಿದೆ . ನಿಂಬಾಳ, ಧುತ್ತರಗಾಂವ ಹಾಗೂ ಜಿಡಗಾ -ಗ್ರಾಮದ ಸರ್ಕಾರಿ ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಇಲ್ಲಿ ಪಿಯು ಕಾಲೇಜು ಮಂಜೂರು ಮಾಡಲಾಗಿದೆ. ತಡಕಲ ಮತ್ತು ಮಾಡಿಯಾಳ ಗ್ರಾಮದಲ್ಲಿ ಹೊಸ ಪಿಯು ಕಾಲೇಜು ಶುರುವಾಗಲಿದೆ ಎಂದು ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ಕೆಕೆಆರ್ ಡಿಬಿ ಯು ಅನುದಾನ ನೀಡುವುದಾಗಿ ಸಮ್ಮತಿಸಿರುವುದನ್ನು ಪರಿಗಣಿಸಿ, ಪದವಿ ಪೂರ್ವ ಕಾಲೇಜುಗಳ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ. ಇದಲ್ಲದೆ, ಅಗತ್ಯ ಮೂಲಸೌಲಭ್ಯಗಳು ಒದಗಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹೊಸ ಪಿಯು ಕಾಲೇಜು ಆರಂಭದಿಂದ ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಸದ್ಯ ಪ್ರಾಥಮಿಕ ಶಾಲಾ ಕಟ್ಟಡ, ಸರ್ಕಾರಿ ಪ್ರೌಢಶಾಲೆಯಲ್ಲಿ ತರಗತಿ ಪ್ರಾರಂಭಿಸಲಾಗುವುದು. ಮುಂದೆ ಸರ್ಕಾರಿ ಜಾಗದಲ್ಲಿ ನೂತನ ಕಾಲೇಜು ಕಟ್ಟಡ ನಿರ್ಮಾಣಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಿಂಬಾಳ, ಧುತ್ತರಗಾಂವ, ಮಾಡಿಯಾಳ ಗ್ರಾಮದಲ್ಲಿ ಪಿಯು ಕಾಲೇಜಿಗಾಗಿ ಬಹುದಿನ ಬೇಡಿಕೆ ಈಗ ಈಡೇರಿದೆ. ವಿಶೇಷವಾಗಿ ಈ ಭಾಗದ ಹೆಣ್ಣು ಮಕ್ಕಳು ಪಿಯು ಶಿಕ್ಷಣ ಪೂರ್ಣಗೊಳಿಸಲು ಅನುಕೂಲವಾಗಲಿದೆ ಎಂದು ಸಿಪಿಐ ಮುಖಂಡ ಭೀಮಾಶಂಕರ ಮಾಡಿಯಾಳ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...