ಕಲಬುರಗಿ| ಬೆಳೆ ವಿಮೆ ಖಾತೆಗೆ ವರ್ಗಾಯಿಸುವಂತೆ ಆಗ್ರಹಿಸಿ ಮೇ 19ರಂದು ಸಾಂಕೇತಿಕ ಧರಣಿ: ಪಾಟೀಲ್ 

Date:

Share post:

ಕಲಬುರಗಿ: ಜಿಲ್ಲೆಯ ರೈತರ ಬೆಳೆ ವಿಮೆ ಖಾತೆಗೆ ವರ್ಗಾಯಿಸುವಂತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ಮೇ 19ರಂದು ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ್ ಪಾಟೀಲ್ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಗತ್ ವೃತ್ತದ ಬಸವೇಶ್ವರ ಮೂರ್ತಿ ಎದುರುಗಡೆ ಧರಣಿ ನಡೆಸಲಾಗುತ್ತಿದ್ದು, ಇದರಲ್ಲಿ ಜಿಲ್ಲೆಯ ಹೆಚ್ಚಿನ ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಕಳೆದ ಮಾರ್ಚ್ ನಲ್ಲಿ ನಡೆಸಿದ ಧರಣಿಯಿಂದಾಗಿ ಮಣಿದು ಸರಕಾರ 236933 ರೈತರಿಗೆ 667.73 ಕೋಟಿ ರೂ. ಬೆಳೆ ವಿಮೆ ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಆದರೆ ಇಲ್ಲಿಯವರೆಗೆ ರೈತರ ಖಾತೆಗೆ ನಯಾಪೈಸೆ ಜಮೆಯಾಗಿಲ್ಲ, ಕೊಟ್ಟ ಮಾತು ಸರಕಾರ ಮರೆತಿದ್ದಂತಿದೆ. ಹಾಗಾಗಿ ಮತ್ತೆ ಎಚ್ಚರಿಸಲು ನಾವು ಸತ್ಯಾಗ್ರಹ ನಡೆಸುತ್ತಿದ್ದೇವೆ ಎಂದರು.

ಈ ವರ್ಷ ಮಳೆಗಾಲ ಜೂನ್ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂತಹ ಸಂದರ್ಭದಲ್ಲಿ ರೈತರು ಬಿತ್ತನೆ ಕಾರ್ಯ ಪ್ರಾರಂಭಿಸಲಿದ್ದಾರೆ. ಈ ವೇಳೆಯಲ್ಲೇ ರೈತರಿಗೆ ಬಿತ್ತನೆ ಬೀಜ, ಗೊಬ್ಬರ, ಬಿತ್ತುವ ಸಾಮಗ್ರಿಗಳು ಸೇರಿದಂತೆ ಇತರ ಪರಿಕರಗಳನ್ನು ಖರೀದಿಸುವ ತುರ್ತು ಅಗತ್ಯವಿದ್ದಾಗ ಅವರಿಗೆ ಹಣದ ಅವಶ್ಯಕತೆ ಇರುತ್ತದೆ, ಹಾಗಾಗಿ ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಸರಕಾರ ಕೂಡಲೇ ವಿಮೆಯನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಶೋಕ್ ಕುಮಾರ್, ಶಿವಾನಂದ್ ಮಠಪತಿ, ಸಿದ್ಧರಾಮ ಪಾಟೀಲ್, ಸುರೇಶ್ ಗುತ್ತೇದಾರ್ ಸೇರಿದಂತೆ ಮತ್ತಿತರರು ಇದ್ದರು.

 

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....