ಕಲಬುರಗಿ| ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಸಮಸ್ಯೆ ಆಲಿಸಿದ ಮಹಿಳಾ ಆಯೋಗ ಅಧ್ಯಕ್ಷೆ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಶನಿವಾರ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹೊನ್ನಕಿರಣಗಿ ಗ್ರಾಮದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು.

      ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರು ರಾಜ್ಯದ 26 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆದರೆ ಕಲಬುರಗಿ ಜಿಲ್ಲೆಯ ಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತಿಯ ನರೇಗಾ ಕೂಲಿ ಕಾರ್ಮಿಕರಲ್ಲಿ ವಿಶೇಷತೆಯನ್ನು ಕಂಡು ಬಂದಿದೆ ಎಂದು ತಿಳಿಸಿದರು. 47 ಕುಟುಂಬಗಳು 100 ಮಾನವ ದಿನಗಳು ಮುಕ್ತಾಯಗೊಂಡಿರುತ್ತದೆ. ಕೂಲಿ ಕಾರ್ಮಿಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.  ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ನರೇಗಾ ಯೋಜನೆಯಡಿ ಬಂದಂತಹ ಕೂಲಿ ಮೊತ್ತ 1 ರೂ. ಲಕ್ಷ ರೂ.ಗಳನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿರುತ್ತಾರೆ. ಇದರ ಜೊತೆಗೆ ಎಲ್ಲಾ ಕೂಲಿ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಇದೇ ರೀತಿ ನರೇಗಾ ಯೋಜನೆಯಡಿ ಕೂಲಿ ಕೆಲಸವನ್ನು ಮಾಡಲು ತಿಳಿಸಿದರು.

         ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಮಾತನಾಡಿ, ಹೊನ್ನಕಿರಣಗಿ ಗ್ರಾಮ ಪಂಚಾಯತಿಯು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನರೇಗಾ ಯೋಜನೆಯ ಸಾಧನೆ ಹಾಗೂ ಪರಿಣಾಮಕಾರಿ ಅನುμÁ್ಟನ ಮಾಡುತ್ತಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕರು ಪಿ.ಎಮ್.ಜೆ.ಜೆ.ವೈ. (PMJJY) ಮತ್ತು ಪಿ.ಎಮ್.ಎಸ್.ಬಿ.ವೈ. PMSBY) ಯೋಜನೆಗಳಡಿ ಇನ್ಸುರೆನ್ಸ್ ಮಾಡಿಕೊಳ್ಳಬೇಕು. ಈಗಾಗಲೇ ದಿನಾಂಕ: 01-04-2025 ರಿಂದ ಕೂಲಿ ಮೊತ್ತವನ್ನು 370 ರೂ.ಗಳಿಗೆ ಹೆಚ್ಚಿಸಲಾಗಿದೆ. ಎಲ್ಲರೂ ನಿಗದಿಪಡಿಸಿದ ಅಳತೆಗನುಗುಣವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ 425  ಕೂಲಿ ಕಾರ್ಮಿಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕಲಬುರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ ಪಟೇಲ, ಕಲಬುರಗಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕವಿತಾ ಕಾಗೆ, ಗ್ರಾಮ ಪಂಚಾಯತಿ ಅಧ್ಯಕ್ಷರು, ತಾಂತ್ರಿಕ ಸಂಯೋಜಕರಾದ ಸತೀಶ್, ತಾಂತ್ರಿಕ ಸಹಾಯಕರಾದ ಜಗದೀಶ್ ಮೇಗಪ್ಪಿ, ಐಈಸಿ ಸಂಯೋಜಕರಾದ ಮೋಸಿನ ಖಾನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕ್ಷೇತ್ರ ಸಹಾಯಕರಾದ ಸದಾಶಿವ ಹೈದರಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....