ಕಲಬುರಗಿ: ಆಳಂದ್‍ನಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ: 2 ಲಕ್ಷ ಪುಸ್ತಕಗಳು ಭಸ್ಮ

Date:

Share post:

ಕಲಬುರಗಿ: ಆಳಂದ ಪಟ್ಟಣದಲ್ಲಿ ಶಿಕ್ಷಣ ಇಲಾಖೆಗೆ ಸೇರಿದ ಪುಸ್ತಕ ಗೋದಾಮೊಂದಕ್ಕೆ ಶುಕ್ರವಾರ ಮಧ್ಯಾಹ್ನ ಭೀಕರ ಬೆಂಕಿ ತಗುಲಿದ ಘಟನೆ ನಡೆದಿದೆ. ಪ್ರಸಕ್ತ ಸಾಲಿಗೆ 4ರಿಂದ 8ನೇ ತರಗತಿಗೆ ವಿವಿಧ ಶಾಲೆಗಳಿಗೆ ವಿತರಣೆಗಾಗಿ ದಾಸ್ತಾನು ಕೈಗೊಂಡ ಪುಸ್ತಕ ಕೋಣೆಗೆ ಬೆಂಕಿ ತಗುಲಿ ಭಾರೀ ನಷ್ಟವಾಗಿದೆ.

ಈ ದುರ್ಘಟನೆಯಲ್ಲಿ ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಇನ್ನೊಂದು ಕೋಣೆಯಲ್ಲಿ ಪುಸ್ತಕಗಳು ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ತೀವ್ರ ಪ್ರಯತ್ನ ನಡೆಸಿದರೂ, ಬೆಂಕಿಯ ತೀವ್ರತೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲಿಲ್ಲ. ಗೋದಾಮಿನಲ್ಲಿ ಇಡಲಾಗಿದ್ದ ಶಾಲೆಗಳಿಗೆ ವಿತರಣೆಯಾಗಬೇಕಿದ್ದ ಪಠ್ಯಪುಸ್ತಕಗಳು, ಕಲಿಕಾ ಸಾಮಗ್ರಿಗಳು ಮತ್ತು ಇತರ ಶೈಕ್ಷಣಿಕ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿವೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ರಂಗಸ್ವಾಮಿ ಶೆಟ್ಟಿ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರೆಪ್ಪ ಬಡಿಗೇರ, ಬಿಆರ್‍ಸಿ ಅಣ್ಣಪ್ಪ ಹಾದಿಮನಿ, ಇಸಿಒ ಶ್ರೀಮಂತ ಪಾಟೀಲ ಅವರು ದೌಡಾಯಿಸಿ ಬಂದು ಹೆಚ್ಚಿನ ಅನಾಹುತವನ್ನು ತಡೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳೊಂದಿಗೆ ಯಶಸ್ವಿಯಾದರು.

ಸ್ಥಳೀಯ ಪೊಲೀಸ್ ಠಾಣೆಯ ಪಿಐ ಶರಣಬಸಪ್ಪ ಕೋಡ್ಲಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕಿಟ್ ಅಥವಾ ದುರಂತ ಚಟುವಟಿಕೆಯ ಸಾಧ್ಯತೆಯನ್ನು ತಳ್ಳಿಹಾಕದೆ, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಸಂಬಂಧ ಶಿಕ್ಷಣಾಧಿಕಾರಿಗಳು ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡು, ಸಾಕ್ಷ್ಯಗಳ ಸಂಗ್ರಹಣೆಗೆ ಪೊಲೀಸರು ಮುಂದಾಗಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...