ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ಕಲಾವಾಣಿ ಸಮಾರೋಪ; ಮಲ್ಲಮ್ಮ ಸೂಲಗಿತ್ತಿಗೆ “ಅವ್ವ ಪ್ರಶಸ್ತಿ”

Date:

Share post:

ಕಲಬುರಗಿ : ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ವiತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಮೇ 19 ರಂದು(ಸೋಮವಾರ) ಬೆಳಗ್ಗೆ 11 ಗಂಟೆಗೆ ಕಲಾವಾಣಿ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಬಿಳ್ಕೋಡುಗೆ ಕಾರ್ಯಕ್ರಮ ನಡೆಯಲಿದೆ.

ಮಹಾವಿದ್ಯಾಲಯದಿಂದ ಪ್ರತಿ ವರ್ಷ ಕೊಡಲ್ಪಡುವ “ಅವ್ವ ಪ್ರಶಸ್ತಿ” ಯನ್ನು 2024-25ನೇ ಸಾಲಿನಲ್ಲಿ ರಾಯಚೂರ ಜಿಲ್ಲೆಯ ಕವಿತಾಳ ಪಟ್ಟಣದ ಸಮಾಜ ಸೇವಕರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ, ಸುಮಾರು 40 ವರ್ಷಗಳಿಂದ 10 ಸಾವಿರಕ್ಕೂ ಹೆಚ್ಚು ಉಚಿತವಾಗಿ ಹೆರಿಗೆ ಮಾಡಿರುವ ಮಲ್ಲಮ್ಮ ಸೂಲಗಿತ್ತಿಯವರಿಗೆ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿಯು ಪ್ರಶಸ್ತಿ ಫಲಕ ಮತ್ತು ನಗದು ಬಹುಮಾನ ಒಳಗೊಂಡಿರುತ್ತದೆ.

ಸoಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಲಬುರಗಿ ಉಪಪೊಲೀಸ್ ಆಯುಕ್ತರಾದ ಕನಿಕಾ ಸಿಕ್ರಿವಾಲ್ ಐಪಿಎಸ್, ರೇಷ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭಾರತಿ ಎನ್.ರೇಷ್ಮಿ ಮತ್ತು ಗೌರವ ಅತಿಥಿಗಳಾಗಿ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ ಕಾಲೇಜುಗಳ ನಿರ್ದೇಶಕರಾದ ಡಾ.ನೀಲಾಂಬಿಕಾ ಶೇರಿಕಾರ, ಕಾರ್ಯಕ್ರಮದ ಅಧ್ಯಕ್ಷತೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ವಹಿಸುವರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...