ಬೈಕಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ; ಪಿಎಸ್‌ಐ ಸೇರಿ ಇಬ್ಬರ ಸಾವು!

Date:

Share post:

ಬೆಂಗಳೂರು: ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಕೆಎಸ್ ಆರ್ಟಿಸಿ ಬಸ್‌ ವೊಂದು ಪಲ್ಟಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಪಿಎಸ್‌ಐ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ರಸ್ತೆ ಸಮೀಪ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ ಐ ನಾಗರಾಜ್ ಹಾಗೂ ಮತ್ತೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗಾಯಾಳುಗಳ ಪೈಕಿ ಒಬ್ಬರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ ಮೂರು ಮಂದಿ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸು. ಕಗ್ಗಲೀಪುರ ಠಾಣೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು, ರಸ್ತೆ ವಿಭಜಕದ ಮೇಲೆ ಹತ್ತಿ ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...