ಹಿರಿಯ ವಿಜ್ಞಾನಿ ಎಂ.ಆರ್. ಶ್ರೀನಿವಾಸನ್ ನಿಧನ

Date:

Share post:

ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.

 95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ.

ಶ್ರೀನಿವಾಸನ್‌ ಅವರು ಭಾರತದ ಪರಮಾಣು ಯೋಜನೆಗಳ ಪಿತಾಮಹ ಡಾ. ಹೋಮಿ ಜಹಾಂಗೀ‌ರ್ ಭಾಭಾ ಅವರೊಂದಿಗೆ ಕೆಲಸ ಮಾಡಿದ್ದರು. ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಬೆಂಗಳೂರು ಮೂಲದ ಡಾ. ಮಾಲೂರು ರಾಮಸ್ವಾಮಿ ಶ್ರೀನಿವಾಸನ್‌ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿದ್ದರು. ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಮತ್ತು ನ್ಯೂಕ್ಲಿಯರ್ ಪವ‌ರ್ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ನ ಸ್ಥಾಪಕ-ಅಧ್ಯಕ್ಷರಾಗಿದ್ದರು.

ಶ್ರೀನಿವಾಸನ್‌ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...