ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌’ಗೆ ಬೂಕರ್ ಪ್ರಶಸ್ತಿ

Date:

Share post:

ಕಲಬುರಗಿ / ಬೆಂಗಳೂರು : ವಕೀಲೆ , ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ 2025ನೇ ಸಾಲಿನ ಬೂಕರ್ ಪ್ರಶಸ್ತಿ ದೊರಕಿದೆ. ಬಾನು ಮುಷ್ತಾಕ್‌ ಅವರು ಬರೆದಿರುವ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ ಕೃತಿಯು ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪ್ರಶಸ್ತಿ ಆಯ್ಕೆಯ ಸಮಿತಿಯು ಲಂಡನ್ ನಲ್ಲಿ ಘೋಷಿಸಿದೆ.

ಈ ಪ್ರಶಸ್ತಿ ವಿಜೇತರಿಗೆ 50,000 ಪೌಂಡ್‌ ಬಹುಮಾನ ಸಿಗಲಿದ್ದು, ಇದನ್ನು ಲೇಖಕರು ಮತ್ತು ಅನುವಾದಕರ ನಡುವೆ ಹಂಚಲಾಗುತ್ತದೆ. ಅಂತಿಮ ಹಂತದಲ್ಲಿ ಆಯ್ಕೆಯಾಗಿದ್ದ ಲೇಖಕರನ್ನು ಲಂಡನ್‌ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಕನ್ನಡ ಲೇಖಕಿ ಬಾನು ಮುಷ್ತಾಕ್‌ರ ಈ ಕಥಾ ಸಂಕಲನವನ್ನು ದೀಪಾ ಭಸ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ‘ಹಾರ್ಟ್ ಲ್ಯಾಂಪ್ʼ ಕಳೆದ ವರ್ಷ ಪೆನ್ ಟ್ರಾನ್ಸ್‌ಲೇಟ್ಸ್‌ ಪ್ರಶಸ್ತಿಯನ್ನೂ ಪಡೆದಿತ್ತು. ಅಂತಿಮ ಹಂತದಲ್ಲಿದ್ದ ಆರು ಇಂಗ್ಲಿಷ್ ಅನುವಾದಿತ ಕೃತಿಗಳಲ್ಲಿ ಎರಡು ಫ್ರೆಂಚ್ ಮತ್ತು ಡ್ಯಾನಿಶ್, ಇಟಾಲಿಯನ್, ಕನ್ನಡ ಮತ್ತು ಜಪಾನೀ ಭಾಷೆಯ ತಲಾ ಒಂದು ಕೃತಿಗಳಿದ್ದವು. ಇದೀಗ ಕನ್ನಡ ಅನುವಾದಿತ ಕೃತಿಗೆ ಬೂಕರ್ ಪ್ರಶಸ್ತಿ ಸಂದಿರುವುದಕ್ಕೆ ಬಾನು ಅವರಿಗೆ ಕನ್ನಡದ ಖ್ಯಾತ ಗಣ್ಯರು ಅಭಿನಂದಿಸುತ್ತಿದ್ದಾರೆ.

ಪ್ರಶಸ್ತಿಯ ಅಂತಿಮ ಘಟ್ಟಕ್ಕೆ ಆರು ಕೃತಿಗಳು ತಲುಪಿದ್ದವು. ಅವುಗಳ ಪೈಕಿ ಬಾನು ಮುಷ್ತಾಕ್ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯಕ್ಕೆ ವಿಶ್ವ ವೇದಿಕೆಯಲ್ಲಿ ಮಹತ್ವದ ಸ್ಥಾನ ದೊರೆತಂತಾಗಿದೆ. ʼಹಾರ್ಟ್ ಲ್ಯಾಂಪ್ʼ ಕೃತಿ ಈ ಹಿಂದೆ ಲಾಂಗ್ ಲಿಸ್ಟ್‌ಗೆ ಆಯ್ಕೆಯಾಗಿತ್ತು. ಬಾನು ಮುಷ್ತಾಕ್‌ರ ಈ ಕಥಾ ಸಂಕಲನವನ್ನು ದೀಪಾ ಭಸ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ʼಹಾರ್ಟ್ ಲ್ಯಾಂಪ್ʼ ಕಳೆದ ವರ್ಷ ಪೆನ್ ಟ್ರಾನ್ಸ್‌ಲೇಟ್ಸ್‌ ಪ್ರಶಸ್ತಿಯನ್ನೂ ಪಡೆದಿತ್ತು. ಅಂತಿಮ ಹಂತದಲ್ಲಿದ್ದ ಆರು ಇಂಗ್ಲಿಷ್ ಅನುವಾದಿತ ಕೃತಿಗಳಲ್ಲಿ ಎರಡು ಫ್ರೆಂಚ್ ಮತ್ತು ಡ್ಯಾನಿಶ್, ಇಟಾಲಿಯನ್, ಕನ್ನಡ ಮತ್ತು ಜಪಾನೀ ಭಾಷೆಯ ತಲಾ ಒಂದು ಕೃತಿಗಳಿದ್ದವು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...