ಕಲಬುರಗಿ| ಮುಖಾಮುಖಿ ಬೈಕ್ ಡಿಕ್ಕಿ – ಸುಟ್ಟು ಕರಕಲಾದ ಬೈಕ್ ಸವಾರ 

Date:

Share post:

ಕಲಬುರಗಿ| ಮುಖಾಮುಖಿ ಬೈಕ್ ಡಿಕ್ಕಿ – ಸುಟ್ಟು ಕರಕಲಾದ ಬೈಕ್ ಸವಾರ

ಕಲಬುರಗಿ: ಕಾಳಗಿ ಪಟ್ಟಣದಿಂದ ಕೊಡದೂರ್ ಗ್ರಾಮವರೆಗೆ ಸಾಗುವ ಮಾರ್ಗದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಿಂದ ಒಂದು ಬೈಕ್‌ಗೆ ಬೆಂಕಿ ತಗುಲಿ, ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ದಶರಥ್ ಮಡಿವಾಳ( 28) ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖಾಮುಖಿ ಡಿಕ್ಕಿಯ ರಭಸಕ್ಕೆ ದಶರಥ್ ಅವರ ಬೈಕ್ ಕೆಳಗೆ ಬಿದ್ದು, ಪೆಟ್ರೋಲ್ ಹರಿದ ಪರಿಣಾಮವಾಗಿ ತಕ್ಷಣವೇ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋಯಿತು. ದಶರಥ್ ಬೈಕ್ ಜೊತೆ ಬೆಂಕಿಗೆ ಆಹುತಿಯಾದರು ಎಂದು ತಿಳಿದುಬಂದಿದೆ.

ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...