ಕಲಬುರಗಿ| ರವಿಕುಮಾರ್, ಛಲವಾದಿ ನಾರಾಯಣ್ ಸ್ವಾಮಿಗೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ: ದೀಪಕನಾಗ್ ಪುಣ್ಯಶೆಟ್ಟಿ 

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಬಿಜೆಪಿಯ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ. ನಿಮ್ಮ ಚಪ್ಪಾಳೆ ನೋಡಿದರೆ, ಜಿಲ್ಲಾಧಿಕಾರಿ ನಿಜಕ್ಕೂ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇನೆ ಎಂದರು.

ವಿರೋಧ ಪಕ್ಷದ ನಾಯಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಕ್ರಮ ಕೈಗೊಳ್ಳಬೇಕು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ಆಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್ ಅವರನ್ನು ಅಮಾನತ್ತುಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡುತ್ತಿದ್ದಾರೆ ಆರೋಪಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯಮಟ್ಟದಲ್ಲಿ ಒಬ್ಬ ದಲಿತ ನಾಯನಾಗಿ ಬೆಳೆಯುತ್ತಿದನ್ನು ಬರುವ ದಿನಗಳಲ್ಲಿ ಉನ್ನತ ಹುದ್ದೆಯಲ್ಲಿ ಆಲಂಕರಿಸಿ ಭವಿಷ್ಯದಲ್ಲಿ ಅವರು ಮುಖ್ಯುಮಂತ್ರಿ ಆಗುತ್ತಾರೆ ಎಂದು ಅವರ ಏಳಿಗೆ ಸಹಿಸಲಾಗದೆ ಅವರ ಬಿಜೆಪಿಯವರು ಖರ್ಗೆ ವಿರುದ್ಧ ಅಪಪ್ರಚಾರ ಮಾಡಿ ಅವರಿಗೆ ಅಗೌರವ ತರುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಏನು ಮಾಡಿದರು ಸತ್ಯ ಇರುತ್ತದೆ ಅವರಿಗೆ ಯಾರು ಪ್ರಶ್ನೆ ಮಾಡಬಾರುದು ಎಂದು ಬಿಜೆಪಿಗರು ಹೇಳುತ್ತಾರೆ, ಪ್ರಧಾನಿ ಮೋದಿ ಅವರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಾರೆ ಎಂದು ಸಹಿಸಲಾರದೆ ಬಿಜೆಪಿ ಅವರು ಖರ್ಗೆ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.

ಅಲ್ಲದೆ, ಅಪರೇಷನ್ ಸಿಂಧೂರದಲ್ಲಿ ಮುಂದಾಳತ್ವ ವಹಿಸಿದ ಸೋಫಿಯಾ ಖುರೇಷಿ ಅವರ ಬಗ್ಗೆಯೂ ಬಿಜೆಪಿಗರು ಅಪಮಾನ ಮಾಡಿದ್ದಾರೆ. ದೇಶಕ್ಕಾಗಿ ಜೀವ ಕೊಡಲು ಸಿದ್ಧವಿರುವ ಸೈನಿಕರನ್ನು ಅವಮಾನಕರ ಮಾಡುತ್ತಿರುವ ರ ವಿರುದ್ಧ ಕಠಿಣ ಕ್ರಮ ಆಗಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಇಬ್ರಾಹಿಂ ಸಾಬ ದೇಗಲಮಡಿ, ಅಲ್ಲಾವುದ್ದಿನ್ ಅನ್ಸಾರಿ, ರಾಜಕುಮಾರ ಮಂದಾ, ಚಂದ್ರಕಾಂತ ತಳವಾರ , ಶರಣು ಪಪ್ಪ, ಶಿವಕುಮಾರ್ ಮುಲ್ಗೆ, ಆಸೀಫ ಹುಡಾ, ಖಾಜಾ ಪಾಟೇಲ, ನಂದಕುಮಾರ ಆವುಂಟಿ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ...