ಕಲಬುರಗಿ| ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Date:

Share post:

ಕಲಬುರಗಿ: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲಾಡ್ಲಾಪುರ ಬೈ ಪಾಸ್ ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದ ತಗ್ಗಿನಲ್ಲಿ ಅಂದಾಜು 40 ವರ್ಷ ವಯಸ್ಸಿನ ಮಹಿಳೆಯ ಶವ ಸಿಕ್ಕಿದೆ. ಮಹಿಳೆಯನ್ನು ಅತ್ಯಾಚಾರ ಮಾಡಿ ನಂತರ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ತಿರುಮಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...