ಕಲಬುರಗಿ| ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

Date:

Share post:

ಕಲಬುರಗಿ: ಕಲಬುರಗಿಯಲ್ಲಿ ಪೊಲೀಸರನ್ನು 15 – 20 ನಿಮಿಷ ತಡೆ ಹಿಡಿದರೆ, ಮುಸ್ಲಿಮರನ್ನು ನಮ್ಮ ಬೋರಮಾಠಿ ಸಮುದಾಯದಿಂದ ಸಾಮೂಹಿಕವಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಣಿಕಂಠ ರಾಠೋಡ್ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು. 8 ದಿವಸಗಳ ಒಳಗಾಗಿ ʼಲವ್‌ ಜಿಹಾದ್ʼ ಆರೋಪಿಗಳನ್ನು ಸಾಯಿಸಬೇಕು ಎಂದು ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಶನಿವಾರ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲ ಎಫ್ಐಆರ್ ನಂತರ ಈಗ ಶಹಾಬಾದ್ ಪೊಲೀಸ್ ಠಾಣೆಯಯಲ್ಲಿ ರವಿವಾರ ಮತ್ತೊಂದು ಪ್ರಕರಣ ದಾಖಲಾಗಿದೆ.

ಶಹಾಬಾದ್ ನಿವಾಸಿ ಮುಹಮ್ಮದ್ ಮಸ್ತಾನ್ ದೂರು ನೀಡಿದ ಮೇರೆಗೆ ಕೋಮು ಸೌಹಾರ್ದತೆ ಕೆಡಿಸಲು ಪ್ರಯತ್ನಿಸಿದ್ದು, ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಶಹಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಇದು ಎರಡನೇ ಪ್ರಕರಣ ದಾಖಲಾಗಿದ್ದು, ಈವರೆಗೆ ಪೊಲೀಸರು ಆತನನ್ನು ಬಂಧಿಸದಿರುವುದು ಮುಸ್ಲಿಂ ಸಮುದಾಯದ ಮತ್ತು ಪ್ರಗತಿಪರ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ ಮಾಡಿರುವ ಆರೋಪದ ಮೇರೆಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...