ಕಲಬುರಗಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್’ರ ಕಲಬುರಗಿ ಪ್ರವಾಸ

Date:

Share post:

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜೂನ್ 6 ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಪೂಜ್ಯ ಬಸವರಾಜಪ್ಪ ಅಪ್ಪ ಮೆಮೋರಿಯಲ್ ಹಾಲ್‍ದಲ್ಲಿ ಕಲಬುರಗಿ ಮಹಾನಗರಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಅವರ ನೇರ ಪಾವತಿ ಯಡಿಯಲ್ಲಿ ಸಭಾಂವನೆ ಪಾವತಿಸುವ ಆದೇಶ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸೇನಾ ಆಯ್ಕೆ ಪೂರ್ವ ತರಬೇತಿಯ ಚಾಲನೆ ಮತ್ತು ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಸೇಡಂ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4 ಗಂಟೆಗೆ ಸುಲೇಪೇಟ್‍ದಲ್ಲಿ ಡಾ. ಬಾಬು ಜಗಜೀವನರಾಮ್‍ರವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಚಿಂಚೋಳಿಯ ವೈಜನಾಥ ಕಲ್ಯಾಣ ಮಂಟಪ ಆವರಣದಲ್ಲಿ 892ನೇ ಬಸವ ಜಯಂತಿ (ಧರ್ಮಸಭೆ) ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 7 ಗಂಟೆಗೆ ಚಿಂಚೋಳಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...