ಕಲಬುರಗಿ| ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ: ಆನಂದ ತೆಗನೂರ

Date:

Share post:

ಕಲಬುರಗಿ: ಕಾಂಗ್ರೆಸ್‌ ಸರ್ಕಾರದ ಅವ್ಯವಸ್ಥೆಯಿಂದಾಗಿ ಹಲವಾರು ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ. ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಇಂತಹ ಘೋರ ಘಟನೆ ಸರಕಾರವೇ ನೈತಿಕ ಹೊಣೆಯಾಗಲಿ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ ಅನೇಕರು ಮೃತಪಟ್ಟ ಘಟನೆ ಅತ್ಯಂತ ನೋವು ತರಿಸಿದೆ. ಈ ರೀತಿಯ ದೊಡ್ಡ ಉತ್ಸವವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಯುತ್ತದೆ ಎಂದು ಗೊತ್ತಿದ್ದರೂ ಕೂಡ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ನಿರೀಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲ. ಆರ್‌ಸಿಬಿ ಜಯದ ಬಳಿಕ ನಾಡಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು, ಮುನ್ನೆಚ್ಚರಿಕೆ ವಹಿಸಿದ್ದರೆ ಸಂಭ್ರಮದ ವೇಳೆ ದುರಂತವನ್ನು ತಪ್ಪಿಸ ಬಹುದಾಗಿತ್ತು ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...