ಕಲಬುರಗಿ| ಸೈನಿಕ ಶಾಲೆಗೆ ಮೂಲಸೌಕರ್ಯಕ್ಕೆ ಸರಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ಕಲಬುರಗಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ನಮ್ಮ ಭಾಗದ ಮಕ್ಕಳು ದೇಶ ಸೇವೆಗೈಯಲು ಸೈನಿಕರಾಗಿ ಆಯ್ಕೆಯಾಗುವಂತೆ ತರಬೇತಿ ಕೊಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಗುಲಬರ್ಗಾ ವಿ.ವಿ. ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಆವರಣದಲ್ಲಿ ಎರಡನೇ ತಂಡದ ತರಬೇತಿಗೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸ್ತುತ 100 ಸಂಖ್ಯೆ ಮಕ್ಕಳಿಗೆ ತರಬೇತಿ ನೀಡುವ ಸಾಮರ್ಥ್ಯ ಇದ್ದು, ಇದನ್ನು ಅಗತ್ಯವಿದ್ದಲ್ಲಿ 500 ಸಂಖ್ಯೆಗೆ ಹೆಚ್ಚಿಸಲು ಸಹ ಪ್ರಸ್ತಾವನೆ ಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಭಾರತ ದೇಶ ಇಂದು ಆರ್ಥಿಕವಾಗಿ ಬಲಿಷ್ಠ ರಾಷ್ಟ್ರವಾಗುವತ್ತ ದಾಪುಗಾಲು ಇಟ್ಟಿದೆ. ಇದಕ್ಕೆ ಪ್ರಜಾಫ್ರಭುತ್ವದ ವ್ಯವಸ್ಥೆ ಕಾರಣವಾದರೆ, ಪ್ರಜಾಪ್ರಭುತ್ವ ಉಳಿವಿಗೆ ಸೇನೆ ಪಾತ್ರ ಹೆಚ್ಚು. ದೇಶ ಸೇವೆಗೆ ತಾವೆಲ್ಲ ಮನೆ-ಮಠ ಬಿಟ್ಟು ಬಂದಿದ್ದೀರಿ. ಕಠಿಣ ಸೇವೆಯ ತರಬೇತಿಗೆ ತಾವೆಲ್ಲ ಅಣಿಯಾಗಿರುವುದು ತಮಗೆ ಸಂತೋಷ ತಂದಿದೆ ಎಂದ ಅವರು, ಕಾಲೇಜು ಮಟ್ಟದಲ್ಲಿ ಯುವಜನತೆಗೆ ಶಿಸ್ತಿನ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ನಾನು ಪ್ರೌಢ ಶಾಲೆಯಲ್ಲಿದ್ದಾಗ ಎನ್.ಸಿ.ಸಿ. ತರಬೇತಿ ಪಡೆದುಕೊಂಡಿರುವೆ. ಮುಂದೆ ಏರ್ ಫೋರ್ಸ್ನಲ್ಲಿ ತರಬೇತಿ ಪಡೆಯಲು ಹೋಗಿದ್ದೆ. ಕೆಲವು ದಿನ ತರಬೇತಿ ಸಹ ಪಡೆದಿದ್ದೆ. ಆದರೆ ತರಬೇತಿಗೆ ತಂದೆ-ತಾಯಿಯ ಸಹಿ ಕಡ್ಡಾಯವಾಗಿತ್ತು. ತಂದೆಯವರ ಸಹಿ ಮಾಡಿಸಿಕೊಂಡಿದೆ, ಅಮ್ಮ ಸಹಿ ಮಾಡಲು ನಿರಾಕರಿಸಿದರು. ಹೀಗಾಗಿ ಏರ್ ಫೋರ್ಸ್ ಮೂಲಕ ದೇಶ ಸೇವೆ ಮಾಡಬೇಕೆನ್ನುವ ಆಸೆ ಈಡೇರಿಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಬಾಲ್ಯದ ಘಟನೆಯ ಮೆಲುಕು ಹಾಕಿದರು.

ಇದೇ ಸಂದರ್ಭದಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳು ತರಬೇತಿಯ ಪ್ರದರ್ಶನ ಮಾಡಿದಲ್ಲದೆ ಭಯೋತ್ಪಾದಕರು ದೇಶಕ್ಕೆ ನುಗ್ಗಿ ಬಂಕರ್‌ನಲ್ಲಿ ಅಡಗಿಕೊಂಡಾಗ ಅವರನ್ನು ಹೊಡೆದು ಬಂಕರ್ ಸರ್ವನಾಶ ಮಾಡುವ ಬಂಕರ್ ಡ್ರಿಲ್ ಮಕ್ಕಳಿಂದ ಪ್ರದರ್ಶನವಾಯಿತು.

ಕಾರ್ಯಕ್ರಮದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋಮಶೇಖರ್ ವೈ. ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜ್ಞಾನಕ್ಕೆ ಸಮಾನವಾದುದ್ದು ಮತ್ತೊಂದಿಲ್ಲ: ಎನ್.ಎಂ.ಬಿರಾದಾರ

ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿರುವುಷ್ಟು ಬೆಲೆ ಬೇರೆ ಯಾವ ವಸ್ತುವಿಗೂ ಇಲ್ಲ ಎಂದು...

ಕಲಬುರಗಿ| ದಂತ ವೈದ್ಯಕೀಯ ಕ್ಷೇತ್ರವು ಸ್ಪರ್ಧಾತ್ಮಕ ಕ್ಷೇತ್ರವಾಗಿ ಬೆಳೆದಿದೆ: ಡಾ. ಶಿವಶರಣ ಕೆ.

ಕಲಬುರಗಿ: ಇತ್ತಿಚಿನ ದಿನಗಳಲ್ಲಿ ದಂತವೈದ್ಯಶಾಸ್ತ್ರವು ಹೆಚ್ಚು ಸ್ಪರ್ಧಾತ್ಮಕ ಕ್ಷೇತ್ರವಾಗಿ ಬೆಳೆಯುತ್ತಿದೆ, ಹಾಗಾಗಿ...

ಕಲಬುರಗಿ| ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2025-26ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ...

ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ...