ಕಲಬುರಗಿ | ಗೋದುತಾಯಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ

Date:

Share post:

ಕಲಬುರಗಿ : ಮಾನವ ಸಂತೋಷ, ಮೋಜು ಮಸ್ತಿಗಾಗಿ ಪರಿಸರವನ್ನು ಮನಬಂದoತೆ ಹಾಳು ಮಾಡುತ್ತಿದ್ದು, ರಕ್ಷಣೆಗೆ ಶ್ರಮಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಅಫಜಲಪುರ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ಸೂರ್ಯಕಾಂತ ಉಮ್ಮಾಪುರೆ ಎಚ್ಚರಿಸಿದರು.

ಗೋದುತಾಯಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ಬಿಇಡಿ ಕಾಲೇಜು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿoದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಪರಿಸರ ಉಳಿಸದಿದ್ದರೆ ಬದುಕು ಉಳಿಯುವುದಿಲ್ಲ ಎಂಬುದು ಅರಿತುಕೊಂಡು ಹೆಜ್ಜೆ ಇರಿಸಬೇಕು. ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಯುವ ಸಮುದಾಯ ಮುಂದಾಗಬೇಕು ಎಂದರು.

ಶರಣಬಸವೇಶ್ವರ ದೇವಸ್ಥಾನ ಆವರಣದ ಕಾಲೇಜುಗಳ ನಿರ್ದೇಶಕಿ ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ್ ಮಾತನಾಡಿ, ಯುವ ಸಮುದಾಯ ಉತ್ತಮ ಮನೋಭಾವನೆ ಬೆಳೆಸಿಕೊಂಡು ಪರಿಸರ ರಕ್ಷಿಸುವುದರ ಜತೆಗೆ ಘನತೆ ಹೆಚ್ಚುವಂತೆ ನಡೆದುಕೊಳ್ಳಬೇಕು. ಸಾರ್ವಜನಿಕರಲ್ಲಿ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಶ್ರಮಿಸಿ ಎಂದು ಕರೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪತ್ರಕರ್ತ ಬಾಬುರಾವ ಯಡ್ರಾಮಿ ಉದ್ಘಾಟಿಸಿ ಮಾತನಾಡಿದರು. ಪ್ರಾಚಾರ್ಯ ಡಾ.ಕಲ್ಪನಾ ಭೀಮಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಯುವ ರೆಡ್ ಕ್ರಾಸ್ ಸಂಚಾಲಕ ಡಾ.ಪದ್ಮರಾಜ ರಾಸಣಗಿ, ಪ್ರಮುಖರಾದ ವಿಶ್ವನಾಥ ಕೋರವಾರ, ಸುಂದರಾಬಾಯಿ ನಾಗಶೆಟ್ಟಿ, ಸಿದ್ದಮ್ಮ ಹೊಸಮನಿ, ಅಶ್ವಿನಿ, ಚಂದ್ರಕಲಾ, ಲಕ್ಷ್ಮಿ, ನಾಗರತ್ನ, ಸುಧಾ ಇತರರಿದ್ದರು.

ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಪಪ್ರಾಚಾರ್ಯೆ ಡಾ.ಸುಪ್ರಿಯಾ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...