ಆಳಂದ| ಪ್ರಾಕೃತಿಕ ಸಂಪತ್ತು ಸಂರಕ್ಷಣೆಗಾಗಿ ಅರಿವು ಅಗತ್ಯ: ಆರ್ ಕೆ ಪಾಟೀಲ್ 

Date:

Share post:

ಕಲಬುರಗಿ: ದಿನೇದಿನೆ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಅಮೂಲ್ಯವಾದ ಪ್ರಾಕೃತಿಕ ಸಂಪತ್ತು ಸಂರಕ್ಷಣೆಗಾಗಿ ಪ್ರತಿಯೊಬ್ಬರಿಗೂ ಅರಿವೂ ಮೂಡಿಸುವದು ಅಗತ್ಯವಾಗಿದೆ  ಎಂದು ಕಲಬುರಗಿ, ಬೀದರ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ ಪಾಟೀಲ ಹೇಳಿದರು.

ಆಳಂದ ತಾಲ್ಲೂಕಿನ ಮಟಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಆಳಂದದ ಸಂಬುದ್ಧ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜು, ಪ್ರಾದೇಶಿಕ ಮತ್ತು ಸಾಮಾಜಿಕ ವಲಯ ಅರಣ್ಯ ಇಲಾಖೆ, 3ಜೆ ಕ್ಲಬ್ ಹಾಗೂ ನಿರಗುಡಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಅರಣ್ಯ, ಪ್ರಮಾಣ ಕಡಿಮೆಯಾಗಿದೆ. ಇದರಿಂದ ಬಿಸಲಿನ ತಾಪ ಹೆಚ್ಚುತ್ತಿದೆ. ಅಲ್ಲದ ಅನಾವೃಷ್ಟಿ, ಅತಿವೃಷ್ಟಿ, ನೀರಿನ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ನಮ್ಮ ರೈತರೂ ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ‌ ಪರಿಹಾರಕ್ಕೆ ಗಡಿಯಲ್ಲಿ ದೇಶ ಕಾಯುವ ಯೋಧರಂತೆ ನಮ್ಮ ಯುವಕರು ತಮ್ಮ ಸುತ್ತ ಗಿಡಮರ ಬೆಳಸಿ, ಉಳಿಸಿಬೇಕಿದೆ ಎಂದರು.

ಕಲಬುರಗಿ ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಡಾ.ಸುಮಿತ್ ಪಾಟೀಲ ಮಾತನಾಡಿ, ಅರಣ್ಯ ಇಲಾಖೆಯು ಪ್ರತಿ ವರ್ಷ ಲಕ್ಷಾಂತರ ಸಸಿಗಳನ್ನು ನೆಟ್ಟು ಬೆಳಸುತ್ತಿದೆ. ಇದರ ಜತೆ ನರೇಗಾ ಯೋಜನೆಯಡಿ ರೈತರಿಗೂ ಸಸಿ ನೆಡಲು ಪ್ರೋತ್ಸಾಹ ನೀಡುವ ಯೋಜನೆ ರೂಪಿಸಲಾಗಿದೆ. ಸಂಘ ,ಸಂಸ್ಥೆ ಹಾಗೂ ಶಾಲಾ ಕಾಲೇಜು ಗಳು ಪರಿಸರ ಸಂರಕ್ಷಣೆಗಾಗಿ ಗಿಡ ಮರ ಬೆಳಸಲು ಅಗತ್ಯ ಚಟುವಟಿಕೆ ಹಮ್ಮಿಕೊಳ್ಳಲು ತಿಳಿಸಿದರು.

ಜಿಲ್ಲಾ ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಸಾಗರ ತಾವಡೆ ಮಾತನಾಡಿ, ಮರಗಿಡಗಳು ಸಮೃದ್ಧಿಯ ಸಂಕೇತವಾಗಿದ್ದು, ವರ್ಷಕ್ಕೆ ಒಂದು ಮರ ಬೆಳೆಸಿದರೆ ನಮ್ಮ ಪರಿಸರವು ಸುಂದರವಾಗಲಿದೆ. ಪರಿಸರ ಸಂರಕ್ಷಣೆಯು ನಮ್ಮ ಮುಂದಿನ ಭವಿಷ್ಯಕ್ಕಾಗಿ ಅನಿವಾರ್ಯವಾಗಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಮಹಾದೇವಪ್ಪ ಪಾಟೀಲ ಮಾತನಾಡಿದರು. ಮಟಕಿ ಶಾಲೆ ಮುಖ್ಯಶಿಕ್ಷಕ ಅಣ್ಣಪ್ಪ ಹಾದಿಮನಿ ಅಧ್ಯಕ್ಷತೆವಹಿಸಿದರು. ಪ್ರಮುಖರಾದ ಪ್ರದೀಪ ಕಾಂಬಳೆ, ಗ್ರಾಪಂ ಉಪಾಧ್ಯಕ್ಷ ಲಾಯಕಲಿ ದಕನೆ, ಪ್ರಾಂಶುಪಾಲ ಸಂಜಯ ಪಾಟೀಲ, ವಲಯ ಅರಣ್ಯ ಅಧಿಕಾರಿಗಳಾದ ಶಾಂತರೆಡ್ಡಿ, ವಿರೇಂದ್ರ ಯಳವಂತಗಿ, ಪಿಡಿಒ ಶಿವಲಿಂಗಯ್ಯ ಮಠಪತಿ, ಗ್ರಾಪಂ ಮಾಜಿ ಅಧ್ಯಕ್ಷ ಸುಭಾಷ ಪಾಟೀಲ, ದತ್ತಾತ್ರೇಯ ಬಿರಾದಾರ, ಗ್ರಾಪಂ ಸದಸ್ಯರಾದ ನಾಗರಾಜ ತಡಕಲ,ರೇವಪ್ಪ ಮುಲಗೆ, ಅಲ್ಲಾಭಕಾಶ್ ಇನಾಂದಾರ, ಚಂದ್ರಕಾಂತ ಸೂರವಸೆ, ದಿಲೀಪ ಕಾಳೆ, ಗುರುಕಿರಣ ವಾಡಿ, ಫಕ್ರೋದಿನ್ ಇನಾಂದಾರ, ಸಿದ್ಧಲಿಂಗ ಹಿಪ್ಪರಗಿ ಉಪಸ್ಥಿತರಿದ್ದರು.

 ಸಿದ್ಧಾರ್ಥ ಹಸೂರೆ ನಿರೂಪಿಸಿದರೆ, ಸಂಜಯ್‌ ಎಸ್ ಪಾಟೀಲ ಸ್ವಾಗತಿಸಿದರು. ಸುರೇಶ ಪಾಟೀಲ ವಂದಿಸಿದರು. ಸಂಗೀತ ಕಲಾವಿದ ಶಂಕರ ಹೂಗಾರ, ಸವಿತಾ ಎಸ್ ಕಾಂಬಳೆ ಅವರು ಪರಿಸರ ಗೀತೆ ಹಾಡಿದರು. ಇದೇ ಸಂದರ್ಭದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಕೈಗೊಳ್ಳಲಾಯಿತು. ನಂತರ ಸಂಬುದ್ಧ ಕಾಲೇಜು ವಿದ್ಯಾರ್ಥಿಗಳಿಂದ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...