ಕಲಬುರಗಿ| ಚಾಕುವಿನಿಂದ ಇರಿದು ಮಹಿಳೆಯ ಭೀಕರ ಕೊಲೆ

Date:

Share post:

ಕಲಬುರಗಿ: ಚಾಕುವಿನಿಂದ ಕತ್ತು ಮತ್ತು ಟೊಂಕಕ್ಕೆ ಇರಿದು ಮಹಿಳೆಯೋರ್ವಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಶಹಾಬಜಾರ್ ಪ್ರದೇಶದಲ್ಲಿ ನಡೆದಿದೆ.

ರೂಪಾ ವೆಂಕಟೇಶ್ ಬಿರಾದಾರ(33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆಯಾದ ರೂಪಾ ಕಲ್ಲಹಂಗರ್ಗ ಗ್ರಾಮದವರಾಗಿದ್ದು, ಶಹಾ ಬಜಾರ್ ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

10 ವರ್ಷಗಳ ಹಿಂದೆ ವೆಂಕಟೇಶ್ ಜೊತೆಗೆ ಮದುವೆಯಾಗಿತ್ತು, ಅನೈತಿಕ ಸಂಬಂಧ ಹೊಂದಿರುವ ಕಾರಣಕ್ಕಾಗಿಯೇ ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತಷ್ಟು ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...