ಕಲಬುರಗಿ| ಜೂನ್ 12, 13 ರಂದು ಕ್ಯಾಂಪಸ್ ಸಂದರ್ಶನ

Date:

Share post:

ಕಲಬುರಗಿ: ಬೆಂಗಳೂರಿನ ಮೆ|| ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವತಿಯಿಂದ ಐ.ಟಿ.ಐ. ಪಾಸಾದ ಮತ್ತು ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಎಲೆಕ್ಟ್ರಿಶಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆಂಡ್ ಕೋಪಾ/ಪಾಸಾ ಅಭ್ಯರ್ಥಿಗಳಿಗೆ ಇದೇ ಜೂನ್ 12 ರಂದು ಬೆಳಿಗ್ಗೆ 9 ಗಂಟೆಗೆ ಹಾಗೂ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಮ್‍ಆರ್‍ಎಸಿ, ಡಿಎಮ್‍ಎಮ್, ವೆಲ್ಡರ್ ಮತ್ತು ಎಲೆಕ್ಟ್ರೋಪ್ಲೇಟರ್ ವೃತ್ತಿಗಳ ಅಭ್ಯರ್ಥಿಗಳಿಗೆ ಇದೇ ಜೂನ್ 13 ರಂದು ಬೆಳಿಗ್ಗೆ 9 ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶುಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

 

ಅಭ್ಯರ್ಥಿಗಳ ವಯೋಮಿತಿ 21 ವರ್ಷದೊಳಗಿರಬೇಕು (ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ವಿನಾಯತಿ ಇರುತ್ತದೆ). ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ವೈಯಕ್ತಿಕ ವಿವರ (ಬಯೋ ಡೇಟಾ) ಎಸ್.ಎಸ್.ಎಲ್.ಸಿ. ಮತ್ತು ಐಟಿಐ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವಚಿತ್ರಗಳು, ಆಧಾರ್‍ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಎಂ.ಎಸ್.ಕೆ.ಮಿಲ್ ರಸ್ತೆ ಕಲಬುರಗಿ ಇಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ದೂರವಾಣಿ ಸಂಖ್ಯೆ 7259272146ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...