ಕಲಬುರಗಿ| ಭೀಮರಾವ ಟಿ.ಟಿ. ಅವರನ್ನು ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ: ಆನಂದ ಮೇತ್ರಿ 

Date:

Share post:

ಕಲಬುರಗಿ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಕಟ್ಟಾಳು ಪಕ್ಷದ ಎಳಿಗೆಗಾಗಿ ಕಳೆದ 40 ವರ್ಷದಿಂದ ಹಗಲಿರುಳು ಶ್ರಮಿಸಿದ ಭೀಮರಾವ ಟಿ.ಟಿ ಅವರಿಗೆ ವಿಧಾನ ಪರಿಷತ್‌ ಸದಸ್ಯ ಅಥವಾ ರಾಜ್ಯ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಿಸುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರಲ್ಲಿ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ತಾಲ್ಲೂಕಾಧ್ಯಕ್ಷ ಆನಂದ ಮೇತ್ರಿ ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸೇವೆಯನ್ನು ಯಾವುದೇ ನಿರೀಕ್ಷೆ ಮಾಡದೇ ಪಕ್ಷಕ್ಕಾಗಿ ಗ್ರಾಮ ಪಂಚಾಯಿತಿ ಹಿಡಿದು, ಪಟ್ಟಣ ಪಂಚಾಯತಿ, ಪುರಸಭೆ, ಮಹಾನಗರ ಪಾಲಿಕೆ, ತಾಲೂಕ ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ದುಡಿದು ಗೆಲ್ಲಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಚಿಂಚೋಳಿ ಮತಕ್ಷೇತ್ರದಲ್ಲಿ ವಿಧಾನಸಭೆ ಅಭ್ಯರ್ಥಿಗಳ ಪರವಾಗಿ ಹಗಲು ರಾತ್ರಿ ಅನ್ನದೇ ಕಾರ್ಯನಿರ್ವಹಿಸಿ ಉಪ ಚುನಾವಣೆಯಲ್ಲಿ ವಿಶೇಷವಾಗಿ ಇವರ ಪಾತ್ರ ತುಂಬಾ ಮುಖ್ಯವಾಗಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ದುಡಿದಿರುವ ಭೀಮರಾಮ ಟಿ.ಟಿ ಅವರನ್ನು ಈ ಭಾರಿ ವಿಧಾನಪರಿಷತ್ ಗೆ ಆಗಲಿ ರಾಜ್ಯ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೇವಣಸಿದ್ದ ಶರ್ಮಾ,ರಾಘವೇಂದ್ರ, ಗೌತಮ್, ಶರಣು ತಳವಾರ, ಚಂದ್ರಕಾಂತ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...