ಕಲಬುರಗಿ| ದಿಢೀರ್ ಹೃದಯಾಘಾತದಿಂದ ಜಿಲ್ಲಾ ನ್ಯಾಯಾಧೀಶರ ಸಾವು

Date:

Share post:

ಕಲಬುರಗಿ: ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನ್ಯಾಯಾಧೀಶರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಜಿಲ್ಲಾ ಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಎಂಬಾತರೆ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

 ಜಿಲ್ಲಾ ಕೋರ್ಟ್‌ನ ಚೇಂಬರ್ ನಲ್ಲಿದ್ದಾಗಲೇ ಎದೆನೋವಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತ್ವರಿತವಾಗಿ ಇಲ್ಲಿನ ಜಯದೇವ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎಂಬುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಮೃತ ನ್ಯಾಯಾಧೀಶ ವಿಶ್ವನಾಥ್ ಮುಗುಟಿ ಅವರು ಕೇವಲ 15 ದಿನಗಳ ಹಿಂದೆ ಕಲಬುರಗಿ ಕೋರ್ಟ್‌ಗೆ ವರ್ಗಾವಣೆಯಾಗಿದ್ದರು. ಜಡ್ಜ್ ಅಗಲಿಕೆಗೆ ಕಲಬುರಗಿ ಜಿಲ್ಲಾ ಬಾರ್ ಅಸೋಸಿಯೇಷನ್ ಕಂಬನಿ ಮಿಡಿದಿದ್ದು, ಸೋಮವಾರ ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...