ಕಲಬುರಗಿ| 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸ್.ಡಿ.ಎ 

Date:

Share post:

ಕಲಬುರಗಿ: ಸಿ.ಸಿ ರೋಡ್ ಕಾಮಗಾರಿ ಮಾಡಿರುವುದರ ಬಗ್ಗೆ ಅನುಮತಿ ಪತ್ರ ಕೊಡುವುದಕ್ಕಾಗಿ 1 ಲಕ್ಷ ರೂ. ಪಡೆಯುತ್ತಿದ್ದ ವೇಳೆ ದ್ವಿತೀಯ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ಕಾಳಗಿ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ದ್ವಿತೀಯ ದರ್ಜೆ ಸಹಾಯಕ ಶರಣಪ್ಪ ಎಂಬಾತಾರೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಸಿಬ್ಬಂದಿ ಎಂದು ತಿಳಿದುಬಂದಿದೆ.

ಶರಣಪ್ಪ ಅವರು, ಸಿಸಿ ರೋಡ್ ಕಾಮಗಾರಿ ಅನುಮತಿ ಪತ್ರ ಕೊಡುವುದಕ್ಕಾಗಿ ಗುತ್ತಿಗೆದಾರ ಅಣವೀರಯ್ಯ ಅವರ ಬಳಿ 1 ಲಕ್ಷ ಹಣ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಮಾಹಿತಿಯನ್ನು ಅಣವೀರಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಎಸ್.ಡಿ.ಎ ಸಿಬ್ಬಂದಿ ಶರಣಪ್ಪ ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ಪೊಲೀಸರ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸಿಬ್ಬಂದಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್ಸ್ಪೆಕ್ಟರ್ ರಾಜಶೇಖರ್, ಸಿಬ್ಬಂದಿಗಳಾದ ಬಸವರಾಜ್. ಎಂ. ಜಿ. ರಾಣುಜಿ, ಪ್ರದೀಪ್, ಫೈಮೋದಿನ್, ಸಂತೋಷಮ್ಮ, ಮಲ್ಲಿನಾಥ್, ಮಲ್ಲಿಕಾರ್ಜುನ್ ಅವರನ್ನು ಒಳಗೊಂಡ ತಂಡ ದಾಳಿ ನಡೆಸಿತ್ತು.

Share post:

spot_imgspot_img

Popular

More like this
Related

ಕಲಬುರಗಿ: ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು ರೂ 208.67 ಕೋಟಿ. ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ 

ತುರ್ತು ಕಾಮಗಾರಿಗಳಿಗೆ ಪುನಃ 72 ಕೋಟಿ ರೂ.ಬಿಡುಗಡೆ: ಪ್ರಿಯಾಂಕ್ ಖರ್ಗೆ ಬೆಂಗಳೂರು: ರಾಜ್ಯದ...

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...