ಕಲಬುರಗಿ| 5.55 ಲಕ್ಷ ಮೌಲ್ಯದ ಗಾಂಜಾ ಜಪ್ತಿ; 6 ಮಂದಿ ಬಂಧನ

Date:

Share post:

ಕಲಬುರಗಿ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿ, ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಬಳಿ 5,55,000(5.55ಲಕ್ಷ) ಮೌಲ್ಯದ 6 ಕೆಜಿ 34 ಗ್ರಾಂ ನಿಷೇಧಿತ ಗಾಂಜಾ ಹಾಗೂ 2,300 ನಗದು ಹಣ ವಶಪಡಿಸಿಕೊಳ್ಳುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಹೀರಪೂರ ನಿವಾಸಿ ಜೈಭಿಮ್ ಮಲ್ಲಿಕಾರ್ಜುನ್ ಬಂಡನಾಕಾರ್(35), ರೋಜಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯಾದುಲ್ಲಾ ಕಾಲೋನಿಯ ನದೀಮ್ ಪಾಶಾ(30) ಮತ್ತು ಯಾದುಲ್ಲಾ ಕಾಲೋನಿಯ ಮುಹಮ್ಮದ್ ಇರ್ಷಾದ್ (24), ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಜಾದಪುರ ರಸ್ತೆಯ ನಿವಾಸಿ ಅಬು ಶೇಖ್(30) ಮತ್ತು ಬಷೀರ್ ಖಾನ್(25), ಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೇಖ್ ರೋಜಾ ಪ್ರದೇಶದ ಮೊಹಮ್ಮದ್ ಚಾಂದ್ ಭಗವಾನ್(24) ಎಂಬಾತರೆ ಬಂಧಿತ ಆರೋಪಿಗಳಾಗಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರಿ ದಾಳಿಯನ್ನು ಯಶಸ್ವಿಯಾಗಿ ಕೈಗೊಂಡಿರುವ ಪೊಲೀಸ್ ಅಧಿಕಾರಿ, ಸಿಬ್ಬದಿಂದಿಯವರನ್ನು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ಅವರು ಶ್ಲಾಘಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...