ಕಲಬುರಗಿ| ಮಧುರಚೆನ್ನ ಪ್ರಶಸ್ತಿಗೆ ವಿಜಯಕುಮಾರ್ ತೇಗಲತಿಪ್ಪಿ ಆಯ್ಕೆ

Date:

Share post:

ಕಲಬುರಗಿ: ಕಳೆದ ಎರಡೂವರೆ ದಶಕಗಳಿಂದಲೂ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ‘ಮಧುರಚೆನ್ನ’ ಎಂಬ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

 

ಕನ್ನಡ ಜಾನಪದ ಪರಿಷತ್, ರಾಜ್ಯ ಘಟಕವು ಇದೇ 25 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಾಂಸ್ಕೃತಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ತೇಗಲತಿಪ್ಪಿ ಯವರ ಸಾಂಸ್ಕೃತಿಕ ಮತ್ತು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಪ್ಪತ್ತೆöದು ವರ್ಷಗಳಿಂದ ಸಾಹಿತ್ಯ, ಸಮಾಜ ಸೇವೆ ಮೌಢ್ಯ ನಿರ್ಮೂಲನೆಯ ಕುರಿತಾಗಿ ಹಲವಾರು ವೈಚಾರಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...