ಕಲಬುರಗಿ| ಯೋಗವು ಮನಸ್ಸು – ದೇಹವನ್ನು ಸಂಪರ್ಕಿಸುವ ಕಲೆಯಾಗಿದೆ: ಶಶೀಲ್ ನಮೋಶಿ 

Date:

Share post:

ಕಲಬುರಗಿ: ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ, ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಇಲಾಖೆಯ ಕೇಂದ್ರ ಸಂವಹನ ಇಲಾಖೆ, ಮಹಿಳಾ ಪತಂಜಲಿ ಯೋಗ ಸಮಿತಿ ಕಲಬುರ್ಗಿ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಬಸವೇಶ್ವರ ಆಸ್ಪತ್ರೆಯ ಆವರಣದಲ್ಲಿ ನಡೆದ 11 ನೇಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿರುವದು ಸಾಮಾನ್ಯವಾಗಿದೆ ಎಂದು ಹೇಳಿದರು.

ಜಗತ್ತಿನಲ್ಲಿಯೇ ಅತೀ ಹೆಚ್ಚು ಯುವಕರನ್ನು ಹೊಂದಿರುವ ನಮ್ಮ ರಾಷ್ಟ್ರ ಸದೃಢವಾಗಿರಬೇಕಾದರೆ ಯುವ ಜನತೆ ಯಾವಾಗಲೂ ಆರೋಗ್ಯದಿಂದ ಇರಬೇಕು, ಇತ್ತಿಚಿನ ದಿನಗಳಲ್ಲಿ ನಮ್ಮ ಯುವಜನತೆ ಯೋಗದ ಕಡೆ ಗಮನಹರಿಸುತ್ತಿರುವದು ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಯೋಗ ನಮ್ಮ ಪ್ರಾಚಿನ ಕಲೆಯಾಗಿದ್ದು, 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಯೋಗ ನಮ್ಮ ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅದಕ್ಕಾಗಿಯೇ ನಮ್ಮ ಯುವ ಜನತೆ, ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ ಎಂದರು.

ವಿಶ್ವ ಯೋಗ ದಿನ 2025ರ ಧ್ಯೇಯ ವಾಕ್ಯ “ಒಂದು ಭೂಮಿ, ಒಂದು ಆರೋಗ್ಯಕ್ಕೆ ಯೋಗ” ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ, ಇದು ವೈಯಕ್ತಿಕ ಯೋಗಕ್ಷೇಮ ಮತ್ತು ಯೋಜನೆಯ ಆರೋಗ್ಯದ ನಡುವಿನ ಸಂಬಂಧ ಒತ್ತಿ ಹೇಳುತ್ತದೆ. ಜೀವನ ಶಾಂತಿಗಾಗಿ ಯೋಗವು ಪ್ರಬಲ ಸಾಧನವಾಗಿ ಮುಂದುವರೆದಿದೆ. ಯೋಗವು ದೇಹವನ್ನು ಬಲಪಡಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ದೈನಂದಿನ ಜೀವನದಲ್ಲಿ ಅರಿವು ಮತ್ತು ಜವಾಬ್ದಾರಿಯ ಉನ್ನತ ಪ್ರಜ್ಞೆಯನ್ನು ಬೆಳೆಸುತ್ತದೆ. ಈ ಯೋಗವು ಆರೋಗ್ಯಕರ ಮತ್ತು ಹೆಚ್ಚು ಸುಸ್ಥಿರ ಜೀವನಶೈಲಿಯನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ನಮ್ಮನ್ನು ನಾವು ನೋಡಿಕೊಳ್ಳುವಲ್ಲಿ, ನಾವು ಭೂಮಿಯ ಬಗ್ಗೆ ಕಾಳಜಿ ವಹಿಸಲು ಪ್ರಾರಂಭಿಸುತ್ತೇವೆ. ವಸುಧೈವ ಕುಟುಂಬಕಂ ಜಗತ್ತು ಒಂದು ಕುಟುಂಬ ಎಂಬ ಶಾಶ್ವತ ಭಾರತೀಯ ನೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಡಾ.ಕಿರಣ್ ದೇಶಮುಖ, ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ.ಶರಣಬಸಪ್ಪ ಹರವಾಳ, ಅನಿಲಕುಮಾರ ಮರಗೋಳ, ನಾಗಣ್ಣ ಘಂಟಿ, ಮಹಿಳಾ ಪತಂಜಲಿ ಯೋಗ ಸಮಿತಿಯ ಸುಮಂಗಲಾ ಚಕ್ರವರ್ತಿ , ವಿರೇಶ ಕುಲಕರ್ಣಿ, ಭಾರತ ಸೇವಾದಳ ಕಲಬುರ್ಗಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಬಡಿಗೇರ, ಚಂದ್ರಶೇಖರ ಜಮಾದಾರ, ವಾರ್ತಾ ಮತ್ತು ಪ್ರಸಾರ ಸಮಿತಿಯ ನಾಗಣ್ಣ ಅಂಬಗೋಳ, ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ಬಸವೇಶ್ವರ ಆಸ್ಪತ್ರೆಯ ಅಧೀಕ್ಷಕರು ಹಾಗೂ ಸಿಬ್ಬಂದಿ ಹಾಗೂ ಸಂಸ್ಥೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...