ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಧುತ್ತರಗಾಂವ, ನಿಂಬಾಳ, ಮಾಡಿಯಾಳ, ಜಿಡಗಾ ಮತ್ತು ತಡಕಲ್ ಈ ಐದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹಂತದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸರ್ಕಾರದ ದಿನಾಂಕ: 25-05-2025 ರನ್ವಯ ಆದೇಶದನ್ವಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ.
ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರಿನ್ಸಿಪಾಲರಿಗೆ 2025ರ ಜೂನ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರು ಆಯ್ಕೆ ಮಾಡಿದ ಉಪನ್ಯಾಸಕರ ವಿಷಯವಾರು ಪಟ್ಟಿಯನ್ನು ಸಲ್ಲಿಸಲು ಕೊನೆಯ ದಿನ 2025ರ ಜೂನ್ 30 ಇರುತ್ತದೆ.
ಈ ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ/ಇಲಾಖೆಯ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ವಿಷಯವಾರು ಖಾಲಿಯಿರುವ ಹುದ್ದೆಗಳ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಿನಿ ವಿಧಾನ ಸೌಧ ಆವರಣ, ಕಲಬುರಗಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.