ಕಲಬುರಗಿ| ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಮಸ್ಯೆ ಬಗೆಹರಿಸಲು ಐ.ಕೆ ಪಾಟೀಲ್ ಆಗ್ರಹ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಿಬ್ಬಂದಿಗಳು ಅನೇಕ ಸಮಸ್ಯೆ ಗಳಿಂದ ಬಳಲುತ್ತಿದ್ದಾರೆ ಪದವಿಪೂರ್ವ ಕಾಲೇಜುಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಐ.ಕೆ ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಸಂಘಟನೆಯಿಂದ ಮನವಿ ಸಲ್ಲಿಸಲಾಗಿದೆ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 2015 ರಿಂದ ಖಾಲಿಯಾಗಿರುವ ಯಾವ ಹುದ್ದೆಗಳಿಗೂ ಅನುದಾನ ನೀಡುತ್ತಿಲ್ಲ, ಹೀಗಾಗಿ ಖಾಲಿಯಾಗಿರುವ ಹುದ್ದೆಗಳು ಖಾಲಿಯಾಗೆ ಉಳಿದಿವೆ. ಆದ್ದರಿಂದ ಉಪನ್ಯಾಸಕರಿಲ್ಲದ ಒಂದು ಎರಡು ವಿಷಯಗಳಲ್ಲಿ ವಿದ್ಯಾರ್ಥಿಗಳು ಫೇಲಾಗಿ ಇಡಿ ಕಾಲೇಜಿನ ಫಲಿತಾಂಶ ಹಾಗೂ ಜಿಲ್ಲೆಯ ಫಲಿತಾಂಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಸರಿಯಾಗಿ ಕಾರ್ಯನಿರ್ವಹಿಸಿದ ಉಪನ್ಯಾಸಕರಿಗೂ ಹಿನ್ನಡೆಯಾಗುತ್ತಿದೆ. ಮೇಲಾಗಿ

ಅಧಿಕಾರಿಗಳು ದಿನಕ್ಕೊಂದು ಆದೇಶ ಹೊರಡಿಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಆತಂಕದಲ್ಲಿ ಕಾರ್ಯನಿರ್ವಹಿಸುವಂತೆ ಮಾಡುತ್ತಿದ್ದಾರೆ ಇದು ಅವರ ಪಾಠ ಪ್ರವಚನಗಳ ಮೇಲೆ ಹಾಗೂ ಪರೀಕ್ಷಾ ಫಲಿತಾಂಶದ ಮೇಲೂ ಕೆಟ್ಟ ಪ್ರಭಾವ ಬೀರುತ್ತಿದೆ ಎಂದಿದ್ದಾರೆ.

 

ಆದ್ದರಿಂದ ಅನುದಾನಿತ ಪದವಿಪೂರ್ವ ಕಾಲೇಜುಗಳ ಸಮಸ್ಯೆಗಳನ್ನು ಬಗೆಹರಿಸಿ ಅವರ ಆತಂಕ ದೂರ ಮಾಡಿ ಫಲಿತಾಂಶ ಹೆಚ್ಚಾಗುವಂತೆ ಕ್ರಮ ವಹಿಸಬೇಕಾಗಿರುವದು ಸರ್ಕಾರದ ಜವಾಬ್ದಾರಿಯಾಗಿದೆ. ಈಗಾಗಲೇ ಪ್ರೌಢ ಶಾಲೆಗಳಲ್ಲಿ ಅನುದಾನಿತ ಒಂದು ವಿಭಾಗಕ್ಕೆ ಸಂಖ್ಯೆ ಇರುವ ಹಾಗೆ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಪ್ರತಿ ಅನುದಾನಿತ ವಿಭಾಗಕ್ಕೆ ಕನಿಷ್ಠ ದಾಖಾಲಾತಿಯನ್ನು 20ಕ್ಕೆ ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

 

ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶು ಪಾಲರು, ಉಪನ್ಯಾಸಕರನ್ನು ಮತ್ತು ಭೋದಕೇತರ ಸಿಬ್ಬಂದಿಗಳಿಗೆ ಕಡ್ಡಾಯ ಸ್ವಯಂ ನಿವೃತ್ತಿ ಆದೇಶ ಮಾಡಲಾಗಿದೆ. ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆದು ಕಾರ್ಯಭಾರ ಅಧಿಕವಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ, ಮೋರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ಮತ್ತು ಆದರ್ಶ ವಿದ್ಯಾಲಯಗಳಿಗೆ ನಿಯೋಜನೆ ಮಾಡಬೇಕು. ಇದರಿಂದ ಸರ್ಕಾರಕ್ಕೆ ಹಣಕಾಸಿನ ತೊಂದರೆಯೂ ಆಗುವುದಿಲ್ಲ. ಸರ್ಕಾರಿ ಸಿಬ್ಬಂದಿಗಳಿಗೆ ಜಾರಿ ಮಾಡುತ್ತಿರುವ ಹಳೆ ಪಿಂಚಣಿ ಯೋಜನೆ, ಆರೋಗ್ಯ ಯೋಜನೆ ಜ್ಯೋತಿ ಸಂಜೀವಿನಿಯನ್ನು, ಹಾಗೂ ಇನ್ನುಳಿದ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳನ್ನು ಅನುದಾನಿತ ಸಿಬ್ಬಂದಿಗಳಿಗೆ ಜಾರಿಗೆ ತರುವ ಮೂಲಕ ಸೇವಾ ಭದ್ರತೆ ನೀಡಬೇಕು, ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ವೇತನ ಬಿಡುಗಡೆ ಮಾಡಲು ಕಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...