ಕಲಬುರಗಿ| ಆರ್ ಡಿಪಿಆರ್ ಇಲಾಖೆಯ ಇಇ, ಪಿಡಿಓ ಮನೆ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

Date:

Share post:

ಕಲಬುರಗಿ: ಮುಂದಿನ ನಾಲ್ಕು ದಿನಗಳಲ್ಲಿ ನಿವೃತಿಯಾಗಲಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಅವರ ಬೆಂಗಳೂರಿನ ಮನೆ ಹಾಗೂ ಕಲಬುರಗಿ ಮನೆ ಕಚೇರಿ ಸೇರಿದಂತೆ ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಅಕ್ರಮ ಸಂಪಾದನೆ ಆರೋಪದ ದೂರಿನ ಮೇರೆಗೆ ಇಇ ಮಲ್ಲಿಕಾರ್ಜುನ ಅಲಿಪುರ ಮನೆ ಮೇಲೆ ದಾಳಿ ಮಾಡಿದ್ದು, ಅಕ್ರಮ ಗಳಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಲಬುರಗಿ ತಾಲ್ಲೂಕಿನ ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರ ಅವರಿಗೆ ಸೇರಿರುವ ಎನ್ನಲಾದ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿ ಮತ್ತು ವಿಜಯಪುರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎರಡು ದಾಳಿಯಲ್ಲಿ ನಾಲ್ಕು ಪೊಲೀಸ್ ಅಧಿಕಾರಿಗಳ ತಂಡಗಳು ಪ್ರತ್ಯೇಕವಾಗಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್‌ ಪಿ ಗೀತಾ ಬೇನಾಳ ನೈತೃತ್ವದಲ್ಲಿ ದಾಳಿ ನಡೆಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...