ಕಲಬುರಗಿ: ಸೇಡಂ ತಾಲೂಕಿನ ಕುರಕುಂಟಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ್, ತಾಲೂಕ ಆರೋಗ್ಯ ಅಧಿಕಾರಿ ಸಂಜೀವ ಪಾಟೀಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ವೇತಾ, ಡಾ. ರೇಖಾ, ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಹಲವರು ಹಾಜರಿದ್ದರು.