ಟೆಂಪೋ ಟ್ರಾವೆಲರ್‌ಗೆ ಲಾರಿ ಢಿಕ್ಕಿ: ಮೂವರ ಸಾವು; 12 ಜನರಿಗೆ ಗಾಯ!

Date:

Share post:

ತಿರುಪತಿ: ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ದಾರುಣ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದೆ.

  ಮೃತರನ್ನು ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್(17), ಚರಣ್(17) ಮತ್ತು ಶ್ರಾವಣಿ(28) ಎಂದು ಗುರುತಿಸಲಾಗಿದೆ. ಲಾರಿ ಡಿಕ್ಕಿ ಹೊಡೆದಾಗ ಟೆಂಪೋ ಟ್ರಾವೆಲರ್ ಮದನಪಲ್ಲಿಯಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿತ್ತು. ಢಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

 ಟೆಂಪೋದಲ್ಲಿದ್ದವರು ತಿರುಪತಿ ದರ್ಶನ ಮುಗಿಸಿ ತಮ್ಮ ತವರೂರಿಗೆ ಮರಳುತ್ತಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....