ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಾರಿಗೆ ಸೇವೆಯ ಕುರಿತು ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಕಂಡುಕೊಳ್ಳಲು ಇದೇ ಜುಲೈ 7 ರಂದು ಮಧ್ಯಾಹ್ನ 3.30 ರಿಂದ ಸಂಜೆ 4.30 ಗಂಟೆಯವರೆಗೆ “ನಮ್ಮ ಸಾರಿಗೆ ನಿಮ್ಮ ಊರಿಗೆ” ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಚಿಂಚೋಳಿ, ಸೇಡಂ, ಚಿತ್ತಾಪೂರ, ಕಾಳಗಿ ಹಾಗೂ ಶಹಾಬಾದ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾರಿಗೆ ಸೌಲಭ್ಯದ ಕುರಿತು ಮೊಬೈಲ್ ಸಂಖ್ಯೆ 6366423879 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.