ಕಲಬುರಗಿ| ಮೂವರ ಬೈಕ್ ಕಳ್ಳರ ಬಂಧನ; 29 ಬೈಕ್ ಜಪ್ತಿ: ಎಸ್ಪಿ ಅಡ್ಡೂರು ಶ್ರೀನಿವಾಸಲು

Date:

Share post:

ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.

ನಗರದ ಪೋಲಿಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆನಕಿಪಳ್ಳಿಯ ಶ್ರೀಕಾಂತ್ ಗಣಪತಿ (27), ಚಿಂಚೋಳಿಯ ಬಸಯ್ಯ ರಾಚಯ್ಯ ಸ್ವಾಮಿ (44) ಹಾಗೂ ಆರ್.ಜಿ.ನಗರದ ಅಭಿನಂದನ ಜೈಭಾರತ ಮಾನೆ ಎಂಬಾತರನ್ನು ವಶಕ್ಕೆ ಪಡೆದು ಅವರಿದ 5.41 ಲಕ್ಷ ರೂಪಾಯಿ ಮೌಲ್ಯದ ಒಟ್ಟು 29 ಹಿರೋ ಹೊಂಡಾ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದರು.

ಪ್ರಕರಣದ ತನಿಖೆ ಕಾರ್ಯದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಉಪ ಅಧೀಕ್ಷಕ ಚಿಂಚೋಳಿಯ ಸಂಗಮನಾಥ ಹಿರೇಮಠ, ಸಿಪಿಐ ಕಪಿಲ್ ದೇವ್ ಮಾರ್ಗದರ್ಶನದಲ್ಲಿ, ಪಿಎಸ್ಐ ಗಂಗಮ್ಮ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚಿಸಿ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...