ಕಲಬುರಗಿ| ಪತ್ನಿಯ ಜೊತೆ‌ ಅನೈತಿಕ ಸಂಬಂಧ ಆರೋಪ; ಆಪ್ತ ಸ್ನೇಹಿತನನ್ನೇ ಹತ್ಯೆಗೈದ ಗೆಳೆಯ

Date:

Share post:

ಕಲಬುರಗಿ: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುವ ಆರೋಪದ ಮೇರೆಗೆ ಪತಿಯೊಬ್ಬ ತನ್ನ ಆಪ್ತ ಸ್ನೇಹಿತನನ್ನೇ ವೈಯರ್ ನಿಂದ ಬಿಗಿದು ಕೊಲೆ ಮಾಡಿರುವ ಘಟನೆ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅಫಜಲಪುರ ಮೂಲದ ಅಂಬರೀಶ್ (28) ಸ್ನೇಹಿತನಿಂದಲೆ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ.

ಕೊಲೆಯಾದ ಅಂಬರೀಶ್, ತನ್ನ ಸ್ನೇಹಿತ ಅಜಯ್ ಪತ್ನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಕುರಿತಾಗಿ ಗೊತ್ತಾದ ಬಳಿಕ ಅಜಯ್ ತನ್ನ ಸ್ನೇಹಿತ ಅಂಬರೀಶ್ ನನ್ನು ಬೆಂಗಳೂರಿನಿಂದ ಗ್ರಾಮಕ್ಕೆ ಕರೆಯಿಸಿಕೊಂಡಿದ್ದ, ಬಳಿಕ ಸ್ಕೆಚ್ ಹಾಕಿ ಅಜಯ್ ಮತ್ತು ಆತನ ಸಂಗಡಿಗರು ಕೂಡಿಕೊಂಡು ಅಂಬರೀಶ್ ನನ್ನು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...