ಕಲಬುರಗಿ| ವಸತಿ ಶಾಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

Date:

Share post:

ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.

ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಈ ಹಿಂದೆ ಹೇಳಿದ್ದನು. ಈ ವೇಳೆ ಪೋಷಕರು ನಾರಾಯಣ ರಾಥೋಡ್ ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲಿಸಿದ್ದರು.

ವಿದ್ಯಾರ್ಥಿ ನಾರಾಯಣನು ತಾಯಿಯನ್ನು ಬಿಟ್ಟಿರಲಾರದೆ ಆತ್ನಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ಧಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ: ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು ರೂ 208.67 ಕೋಟಿ. ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ 

ತುರ್ತು ಕಾಮಗಾರಿಗಳಿಗೆ ಪುನಃ 72 ಕೋಟಿ ರೂ.ಬಿಡುಗಡೆ: ಪ್ರಿಯಾಂಕ್ ಖರ್ಗೆ ಬೆಂಗಳೂರು: ರಾಜ್ಯದ...

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...