ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

Date:

Share post:

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ (ದಿನಾಂಕ:12-07-2025ರಂದು) ಶನಿವಾರ ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಒಟ್ಟು 1,76,324 ಪ್ರಕರಣಗಳು ಇತ್ಯರ್ಥವಾಗಿದ್ದು, ಅವುಗಳಲ್ಲಿ 15,877 ಪೆಂಡಿಂಗ್ ಪ್ರಕರಣಗಳು ಹಾಗೂ 1,60,447 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿರುತ್ತವೆ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ್ ನವಲೆ ಅವರು ತಿಳಿಸಿದ್ದಾರೆ.

ಅದೇ ರೀತಿ ಜಿಲ್ಲೆಯಲ್ಲಿ 09 ಪ್ರಕರಣಗಳಲ್ಲಿ ಬೇರ್ಪಡೆಯಾಗಿದ್ದ ಪತಿ ಮತ್ತು ಪತ್ನಿಯರನ್ನು ಒಂದುಗೂಡಿಸಲಾಯಿತು. 10 ವರ್ಷಗಳಿಗಿಂತ ಹೆಚ್ಚಿನ ಅವಧಿಯ 01 ಪ್ರಕರಣ, 05 ವರ್ಷಗಳಿಗಿಂತ ಹೆಚ್ಚಿನ ಅವಧಿಯ 05 ಪ್ರಕರಣಗಳನ್ನು ರಾಜಿ ಮಾಡಿಸಿದ್ದು, ಈ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಅದ್ಭುತ ಯಶಸ್ಸನ್ನು ಕಂಡಿರುತ್ತದೆ.

ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಎಲ್. ಲಕ್ಷ್ಮೀನಾರಾಯಣ ಸೇರಿದಂತೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು, ಸಾರ್ವಜನಿಕರು ಹಾಗೂ ಕಕ್ಷಿದಾರರ ಸಹಕಾರದಿಂದ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಸಿವಿಲ್ ದಾವೆಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು ಹಾಗೂ ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಶನಿವಾರ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಈ ರಾಷ್ಟ್ರೀಯ ಲೋಕ್‍ಅದಾಲತ್ ಹಮ್ಮಿಕೊಳ್ಳಲಾಗಿತ್ತು.

ಈ ಲೋಕ ಅದಾಲತ್‍ನಲ್ಲಿ ಕಕ್ಷಿದಾರರು, ನ್ಯಾಯಾಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ನ್ಯಾಯವಾದಿಗಳು ರಾಜೀ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...