ಕಲಬುರಗಿ| ಪಿ.ಇ.ಟಿ.ಸಿ ತರಬೇತಿ ಕೇಂದ್ರಕ್ಕೆ ಡಿ.ಸಿ. ಬಿ.ಫೌಜಿಯಾ ಭೇಟಿ

Date:

Share post:

ಕಲಬುರಗಿ: ಕಲಬುರಗಿ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರಕ್ಕೆ (ನೈಸ್ ಅಕಾಡೆಮಿ)ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಭೇಟಿ ನೀಡಿ, ಕಾಮಗಾರಿಯ ಅಂತಿಮ‌ ಹಂತದ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು.

ಉಳಿದ ಕಾಮಗಾರಿಗಳನ್ನು ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿ ಪೂರ್ಣಗೊಂಡಲ್ಲಿ ಇದನ್ನು ಲೋಕಾರ್ಪಣೆಗೊಳಿಸಿ ಪ್ರದೇಶದ ಯುವಕರಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಸಹಾಯವಾಗಲಿದೆ ಎಂದರು.

ಸುಮಾರು 10 ಕೋಟಿ ರೂ.‌ ವೆಚ್ಚದಲ್ಲಿ ತರಬೇತಿ ಕೇಂದ್ರ ನಿರ್ಮಾಣವಾಗುತ್ತಿದೆ. ತರಬೇತಿ ಕೇಂದ್ರದಲ್ಲಿ ಪ್ರಾರಂಭಿಕ 500 ರಿಂದ ಆರಂಭಿಸಿ ಗರಿಷ್ಠ ವಾರ್ಷಿಕ 2,000 ಜನ ವಿದ್ಯಾರ್ಥಿಗಳಿಗೆ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್, ಬ್ಯಾಂಕಿಂಗ್ ಸೇರಿದಂತೆ ಇತರೆ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಇಲ್ಲಿ ನೀಡಲಾಗುತ್ತಿದೆ. ಸಕಲ ಸೌಲಭ್ಯವುಳ್ಳ ಉತ್ತಮ‌ ಬೋಧನಾ ಕೊಠಡಿ, ಕಂಪ್ಯೂಟರ್ ಕೋಣೆ, ವಸತಿ ನಿಲಯಗಳನ್ನು ಇದು ಒಳಗೊಂಡಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಕಲಬುರಗಿ ತಹಶೀಲ್ದಾರ ಕೆ. ಆನಂದಶೀಲ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕನಿಷ್ಠ ಬೆಂಬಲ ಬೆಲೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೋರಾಟ ಕೈಗೊಳ್ಳಲಿ: ಬಿ.ಆರ್.ಪಾಟೀಲ್ 

ಕಲಬುರಗಿ: 'ರಾಷ್ಟ್ರಮಟ್ಟದಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾಯ್ದೆ ಜಾರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಲಬುರಗಿ| ಕುಶಲಕರ್ಮಿಗಳಿಗೆ ಒಂದು ದಿನದ ಕಾರ್ಯಾಗಾರಕ್ಕೆ ಡಿ.ಸಿ ಬಿ.ಫೌಜಿಯಾ ತರನ್ನುಮ್ ಚಾಲನೆ

ಕಲಬುರಗಿ: ಕರಕುಶಲ ವಸ್ತುಗಳನ್ನು ಉತ್ಪಾದಿಸುವುದರ ಜೊತೆಗೆ ಆ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿ...

ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...