ಕಲಬುರಗಿ| ವಿವಿಧ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ

Date:

Share post:

ಕಲಬುರಗಿ: 2025-26ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ ಮತ್ತು ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆ ಸೇರಿದಂತೆ ಮತ್ತಿತರ ಯೋಜನೆಯ ಅನುಷ್ಟಾನಕ್ಕಾಗಿ ಕ್ರಿಯಾ ಯೋಜನೆಗಳಿಗೆ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನುಮ್ ಅವರು ಅನುಮೋದನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಅವರು, ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿಗಳನ್ನು ಪರಿಶೀಲಿಸಿ ಪ್ರಸಕ್ತ ಸಾಲಿನ ಗುರಿಗಳನ್ನು ಅಕ್ಟೋಬರ್-ನವೆಂಬರ್ ಮಾಹೆಯ ಅಂತ್ಯದವರೆಗೆ ಪೂರ್ಣ ಪ್ರಗತಿ ಸಾಧಿಸಿ ಹೆಚ್ಚುವರಿ ಗುರಿಯನ್ನು ಪಡೆಯಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತಾಲ್ಲೂಕಿಗೆ ಒಂದರಂತೆ ಸಂಬಂಧಪಟ್ಟ ಸ್ಥಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳೊಂದಿಗೆ ಚರ್ಚಿಸಿ ಅವಶ್ಯವಿರುವ ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆಗೆ ವಿಸ್ತøತ ಯೋಜನಾ ವರದಿಗಳನ್ನು ತಯಾರಿಸಿ ತೋಟಗಾರಿಕೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ಕಲಬುರಗಿ ಮತ್ತು ಚಿಂಚೋಳಿ ತಾಲ್ಲೂಕುಗಳು ಆಯ್ಕೆಯಾಗಿದ್ದು ಹೆಚ್ಚುವರಿಯಾಗಿ 2 ಗುಚ್ಛಗಳನ್ನು ಆಯ್ಕೆಮಾಡಿ ತೋಟಗಾರಿಕೆ ನಿರ್ದೇಶನಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಮದಾರ್, ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ನಾಗನಗೌಡ, ಕೃಷಿ ವಿಜ್ಞಾನಿ ಸನ್ಮಿತಾ, ಹೈದ್ರಾಬಾದ್ ವೇದಿಕ ಸಂಸ್ಥೆಯ ಸುನೀತಾ ಸೇರಿದಂತೆ ವಿವಿಧ ತಾಲೂಕಿನ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...