ಕಲಬುರಗಿ| ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2025-26ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಸೇರಿದವರಾಗಿರಬೇಕು. ಅರ್ಜಿದಾರರು https:/sevasindhu.karnataka.gov.in/sevasindhu/Departmentservices ಈ ಲಿಂಕ್ ಮೂಲಕ 2025ರ ಆಗಸ್ಟ್ 2 ರೊಳಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ https://dom.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...