ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ.
ನಾಗಣ್ಣಾ ಚಂದ್ರಶೆಟ್ಟಿ (58) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ.
ಕೃಷ್ಣಾ ಗ್ರಾಮೀಣ ಬ್ಯಾಂಕ್ ರಟಕಲ್ ನಲ್ಲಿ ಬೆಳೆ ಸಾಲ 1 ಲಕ್ಷ ಹಾಗೂ ಖಾಸಗಿಯಾಗಿ 7 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲವನ್ನು ತೀರಿಸಲು ಆಗದೆ ರೈತ ನಾಗಣ್ಣಾ ತನ್ನ ಸ್ವಂತ ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ರಟಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.