ಕಲಬುರಗಿ: ಕುಖ್ಯಾತಿ ಬೈಕ್ ಕಳ್ಳನೊಬ್ಬನನ್ನು ಬಂಧಿಸಿ, ಆತನಿಂದ 5 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಇಲ್ಲಿನ ರಾಘವೇಂದ್ರ ನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಡಿಯಲ್ಲಿ ಆಲೂಬಾತ್ ವ್ಯಾಪಾರ ಮಾಡುತ್ತಿದ್ದ ಮೋಮಿನಪುರ ನಿವಾಸಿ ಮಹ್ಮದ್ ಸಾದಿಕ್ ಲಾಡ್ಲೆ ಪಟೇಲ್ (22)ನನ್ನು ಬಂಧಿತ ಆರೋಪಿಯಾಗಿದ್ದಾನೆ.
ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಈತನಿಂದ ಸ್ಪ್ಲೆಂಡರ್ ಪ್ಲಸ್, ಹೋಂಡಾ ಆಕ್ಟಿವಾ ಸೇರಿದಂತೆ ವಿವಿಧ ಕಂಪನಿ ಸುಮಾರು 10 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಿಸ್ಬಾ ನಗರ ನಿವಾಸಿ ನಜರೋದ್ದಿನ್ ಎಂಬಾತರು ತಮ್ಮ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.