ಬೆಂಗಳೂರು: ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರು ಸಹಕಾರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಈ ಬಗ್ಗೆ ಉತ್ತರಿಸುವುದಾಗಿ ತಿಳಿಸಿದ್ದಾರೆ. ರಾಜಣ್ಣ ರಾಜೀನಾಮೆಗೆ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದೆ ಮುಳುವಾಯ್ತಾ? ಎನ್ನುವ ಪ್ರಶ್ನೆ ರಾಜ್ಯ ರಾಜಕೀಯ ವಲಯದಲ್ಲಿ ಕಾಡುತ್ತಿದೆ.