ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ-ಸoಸ್ಥೆಗಳ ಪ್ರತಿನಿಧಿಯಾಗಿ ಕಲಬುರಗಿ ಜಿಲ್ಲಾ ನಿವೃತ್ತ ಅಲ್ಪಸಂಖ್ಯಾತರ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸೈಯ್ಯದ್ ನಜಿರುದ್ದೀನ್ ಮುತ್ತವಲಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಮುಸ್ಲಿಂ ಸಮುದಾಯಕ್ಕೆ ಸೇರಿದ ಮುತ್ತವಲಿ ಅವರು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ. ಹಲವು ಸಾಮಾಜಿಕ ಸಂಘಟನೆಗಳೊoದಿಗೆ ಒಡನಾಟ ಹೊಂದಿದ್ದು, ನಿರಂತರ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಇವರ ಕನ್ನಡ ಪರ ಕಾಳಜಿ ಪರಿಗಣಿಸಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಕಾರ್ಯಕಾರಿ ಸಮಿತಿಗೆ ಕಲಬುರಗಿ ಜಿಲ್ಲೆಯ ಹೋರಾಟಗಾರರೊಬ್ಬರಿಗೆ ಅವಕಾಶ ನೀಡಿರುವುದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.