ಕಲಬುರಗಿ| ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲ ನದಿಗಳಾದ ಭೀಮಾ ಹಾಗೂ ಬೆಣ್ಣೆತೋರಾ ನದಿಗಳ ಜಲಾನಯನ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಮಣ್ಣು ಮಿಶ್ರಿತ ನೀರು ಬರುತ್ತಿದೆ. ಆದ್ದರಿಂದ ಈ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಐಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಕಲಬುರಗಿ ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೇ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪಿ ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ನೀರಿನ ತೊಟ್ಟಿ ಅಳವಡಿಸುವುದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.

ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಬೇಕು. ನೀರಿನ ಸಮಸ್ಯೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ದೂರವಾಣಿ ಸಂಖ್ಯೆ: +91 1800 425 8247 (ccc) ಹಾಗೂ 08472-237247ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....