ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಆಗಸ್ಟ್ 14 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ವೆಕ್ ಇನ್ಫೋಟೇಕ್‍ದಲ್ಲಿ ಕಂಪ್ಯೂಟರ್/ಇಂಗ್ಲೀಷ್ ತರಬೇತುದಾರ ಹುದ್ದೆಗೆ ಯಾವುದೇ ಪದವಿ/ ಬಿ.ಎಡ್. (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು.
ಆದಿತ್ರಿ ಮಾಡ್ಯುಲರ್ ಇಂಡಸ್ಟ್ರೀಸ್‍ದಲ್ಲಿ ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಹೆಲ್ಪರ್ ಮತ್ತು ಕಾರ್ಪೇಂಟರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. (ಪಾಸ್/ಫೇಲ್), ಐಟಿಐ (ಯಾವುದೇ ಟ್ರೇಡ್) ವಿದ್ಯಾರ್ಹತೆ ಹೊಂದಿರಬೇಕು. ಅಟೋಕ್ಯಾಡ್ ಇಂಜಿನೀಯರ್ ಹುದ್ದೆಗೆ ಡಿಪ್ಲೋಮಾ(ಸಿವಿಲ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಶ್ರಿ ಸಾಯಿ ಅರ್ಥ್ ಮೂವರ್ಸ್ (ಜೆಸಿಬಿ)ದಲ್ಲಿ ಮಾರ್ಕೇಟಿಂಗ್ ಎಕ್ಸಿಕ್ಯೂಟೀವ್ ಹುದ್ದೆಗೆ ಎಂಬಿಎ (ಮಾರ್ಕೇಟಿಂಗ್), ಬ್ಯಾಕ್‍ಆಫೀಸ್ (ಮಹಿಳೆಯರು) ಹುದ್ದೆಗೆ ಬಿಸಿಎ, ಬಿಬಿಎ, ಬಿ.ಕಾಮ್, ಬಿಬಿಎಂ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಸ್ವೀಗ್ಗಿಯಲ್ಲಿ ಡೆಲಿವರಿ ಬಾಯ್ ಹುದ್ದೆಗೆ ಎಸ್.ಎಸ್.ಎಲ್.ಸಿ/ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಲಾಹೋಟಿ ಮೋಟಾರ್ಸ್‍ದಲ್ಲಿ ರಿಲೇಷನ್‍ಶೀಫ್ ಮ್ಯಾನೇಜರ್ ಮತ್ತು ರಿಷೇಪ್ಶನಿಸ್ಟ / ಶೋರೂಮ್ ಹೊಸ್ಟೆಸ್ಸ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗಮೇಳದಲ್ಲಿ ಭಾಗವಹಿಸಬೇಕು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.