ಕಲಬುರಗಿ: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರದ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇಲ್ಲಿನ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷರಾದ ಖಮರ್ ಜುನೈದ್ ಖುರೇಷಿ ಎಂಬಾತರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದೇ ಆ. 11 ರಂದು ಕೊಪ್ಪಳದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ ಅವರು ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು ಮದುವೆಯಾದರೆ 5 ಲಕ್ಷ ರೂ.ಗಳನ್ನು ನಗದು ಪ್ರೋತ್ಸಾಹ ಧನ ನೀಡಲಾಗುವುದೆಂದು ಸಾರ್ವಜನಿಕವಾಗಿ ಘೋಷಣೆ ಮಾಡಿರುವ ಹೇಳಿಕೆಯು ಒಂದು ಸಮುದಾಯವನ್ನು ಪ್ರಚೋದಿಸುವ ಕೆಲಸ ಯತ್ನಾಳ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.